ಚಾಮರಾಜನಗರ –
ಎಸ್ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ನಡೆದಿದೆ.
ವಿದ್ಯಾರ್ಥಿನಿ ಫಿಲಿಶ್(15) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಸಿಎಂಎಸ್ ಅನಾಥಾಲಯ ದಲ್ಲಿ ವಾಯು ವಿವಾರ ಮಾಡುತ್ತಿದ್ದ ವೇಳೆ ಏಕಾ ಏಕಿ ಕುಸಿದು ಬಿದ್ದಿದ್ದಾಳೆನ್ನಲಾಗಿದೆ.ನಂತರ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ವೈದ್ಯರು ತಪಾಸಣೆಗೆ ಒಳಪಡಿಸಿದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಚಾಮರಾಜನಗರ…..