SSLC ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಗೆ ಶರಣಾದ ಆತ್ಮಿಕಾ…..

Suddi Sante Desk

ವಿಟ್ಲ –

ಹತ್ತನೇ ತರಗತಿ ವಿದ್ಯಾರ್ಥಿನಿ ಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಯ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ಎಂದು ಗುರುತಿಸಲಾಗಿದೆ.

ಆತ್ಮಿಕಾ ಅವರ ಕುಟುಂಬ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಂದು ಮನೆ ಮಂದಿ ಕೆಲಸಕ್ಕೆ ಹೋಗಿದ್ದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇನ್ನೂ ಈ ಕುರಿತು ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.