ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯವರಿಗೆ ಮುಂಬಡ್ತಿ – ಮುಂಬಡ್ತಿ ಹೊಂದಿದ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ರಾಜ್ಯದ ಸಮಸ್ತ ಸರ್ಕಾರಿ ನೌಕರರು
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿಯವರಿಗೆ ಮುಂಬಡ್ತಿಯನ್ನು ನೀಡಲಾಗಿದೆ.ಹೌದು ರಾಜ್ಯದ ಸಮಸ್ತ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರಾಗಿ ಕೆಲಸವನ್ನು ಮಾಡುತ್ತಿ ರುವ ಷಡಾಕ್ಷರಿಯವರಿಗೆ ಬಡ್ತಿ ಭಾಗ್ಯವನ್ನು ರಾಜ್ಯ ಸರ್ಕಾರ ನೀಡಿದ್ದು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ರವರನ್ನು ಲೆಕ್ಕ ಪರಿಶೋಧನಾಧಿಕಾರಿಯಾಗಿ ಮಂಬಡ್ತಿ ನೀಡಲಾಗಿದೆ.ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಬೆಂಗಳೂರು, ಡಿ.ಎಂ.ಎಫ್ ಕೋಶದ ಖಾಲಿ ಹುದ್ದೆಗೆ ಸ್ಥಳ ನಿಯುಕ್ತಿಯನ್ನು ಮಾಡಲಾಗಿದ್ದು
ಮುಂಬಡ್ತಿ ಹೊಂದಿರುವ ಸಿ.ಎಸ್. ಷಡಾಕ್ಷರಿಯ ವರಿಗೆ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಸಂಘಟನೆಯ ಮುಖಂಡರು ಸೇರಿದಂತೆ ಪ್ರತಿಯೊಬ್ಬರು ಹೃತ್ಪೂರ್ವಕವಾಗಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……