ಮತ್ತೊಂದು ಗುಡ್ ನ್ಯೂಸ್ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರಿ ನೌಕರರು – ತುಟ್ಟಿ ಭತ್ಯೆ ಹೆಚ್ಚಳ ಆದೇಶ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರಿ ನೌಕರರು…..

Suddi Sante Desk
ಮತ್ತೊಂದು ಗುಡ್ ನ್ಯೂಸ್ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರಿ ನೌಕರರು – ತುಟ್ಟಿ ಭತ್ಯೆ ಹೆಚ್ಚಳ ಆದೇಶ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರಿ ನೌಕರರು…..

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರು ಮತ್ತೊಂದು ಗುಡ್ ನ್ಯೂಸ್ ನಿರೀಕ್ಷೆಯಲ್ಲಿದ್ದಾರೆ.ಹೌದು ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಗುಡ್‌ನ್ಯೂಸ್‌ ಸಿಗುವ ನಿರೀಕ್ಷೆ ಇದ್ದು ತುಟ್ಟಿ ಭತ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಪ್ರತಿಕ್ರಿಯಿಸಿದ್ದು ರಾಜ್ಯ ಸರ್ಕಾರವು ಶೀಘ್ರವೇ ಡಿಎ ಹೆಚ್ಚಳ ಮಾಡುವ ಸಾಧ್ಯತೆಯಿದೆ.ತುಟ್ಟಿ ಭತ್ಯೆ ಆದೇಶದ ಕಡತ ಸರ್ಕಾರದಲ್ಲಿ ಅನುಮೋದನೆಗೆ ಬಾಕಿಯಿದ್ದು, ಸೋಮವಾರ ಅಥವಾ ಮಂಗಳವಾರ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಇನ್ನೂ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ ಹಾಗೂ ತುಟ್ಟಿ ಪರಿಹಾರ. ವನ್ನು ಘೋಷಿಸಲಾಗಿತ್ತು. ಇದರ ಬೆನ್ನಲ್ಲೆ ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ ನೀಡಿವೆ. ಕೋಟ್ಯಾಂತರ ನೌಕರರು, ಪಿಂಚಣಿದಾರಿಗೆ ಡಿಎ ಜೊತೆಗೆ ದೀಪಾವಳಿ ಬೋನಸ್‌ ಸಹ ಘೋಷಣೆ ಆಗಿದೆ. ದೀಪಾವಳಿ ಹಬ್ಬಕ್ಕೆ ಸರ್ಕಾರಿ ನೌಕರರ ಖುಷಿ ಡಬಲ್ ಆಗಿದೆ ಆದರೆ ರಾಜ್ಯ ಸರ್ಕಾರಿ ನೌಕರರಿಗೆ ಈ ಒಂದು ಕುರಿತಂತೆ ಇನ್ನೂ ಆದೇಶವಾಗಿಲ್ಲ.

ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಕೂಡಾ ಬರೆದಿದ್ದು ಸಿ.ಎಸ್‌.ಷಡಾಕ್ಷರಿ ಅವರು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿದೆ.ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ 2024ರ ಜುಲೈ 1 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ

ಆದ್ದರಿಂದ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದ ಸರ್ಕಾರಿ ನೌಕರರಿಗೆ ಜುಲೈ 1 ರಿಂದ ಅನ್ವಯವಾಗು ವಂತೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಕೋರಿದ್ದಾರೆ.ಕೆಲವು ದಿನಗಳ ಹಿಂದೆ ಕೇಂದ್ರ ಸರಕಾರ ತುಟ್ಟಿ ಭತ್ಯೆ ಶೇ. 3ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿತ್ತು.

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆಗೆ ಅಸ್ತು ಎಂದಿತ್ತು. ಇದ ರೊಂದಿಗೆ ಕೇಂದ್ರ ಸರಕಾರಿ ನೌಕರರ ಒಟ್ಟಾರೆ ತುಟ್ಟಿ ಭತ್ಯೆ ಹಾಲಿ ಶೇ. 50ರಿಂದ ಶೇ. 53ಕ್ಕೆ ಏರಿದೆ. 10 ಲಕ್ಷಕ್ಕೂ ಹೆಚ್ಚು ಫಲಾನುಭವಿ ನೌಕರರು ಇದರ ಪ್ರಯೋಜನ ಪಡೆಯಲಿದ್ದು ಇನ್ನೂ ಇತ್ತ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಎಷ್ಟು ಡಿಎ ಹೆಚ್ಚಳ ಮಾಡಲಿದೆ ಎಂಬೊದನ್ನು ಕಾದು ನೋಡಬೇಕಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.