ಬೆಂಗಳೂರು –
ಕರ್ನಾಟಕ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಅಧ್ಯಕ್ಷರ ಜೊತೆ ಸಭೆಯನ್ನು ಆಯೋಜಿಸಲಾಗಿದೆ. ಫೆಬ್ರವರಿ 21ರಂದು ಸಭೆ ನಡೆಯಲಿದೆ.
ಸಭೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸ್ವೀಕೃತವಾಗಿರುವ ಬೇಡಿಕೆಯನ್ನು ಇಲಾಖೆಗಳಿಗೆ ಕಳಿಸಿ ಮಾಹಿತಿಯನ್ನು ನೀಡುವಂತೆ ನಿರ್ದೇಶನ ನೀಡಲಾಗಿದೆ.ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿ ಕಾರಿಗಳೊಂದಿಗೆ ನಡೆಯಲಿರುವ ಸಭೆಯಲ್ಲಿ
ಯಾವ-ಯಾವ ವಿಷಯಗಳ ಕುರಿತು ಚರ್ಚಿಸಬೇಕು ಎಂದು ಈಗಾಗಲೇ ಸಂಕ್ಷಿಪ್ತ ಮಾಹಿತಿ ನೀಡಲಾಗಿದೆ, ಹಲವು ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಲಿದ್ದು ಸಭೆ ತೀವ್ರ ಕುತೂಹಲ ಕೆರಳಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..