ಬೆಂಗಳೂರು –
ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ ಕೊಟ್ಟ ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಜುಲೈ 1ರಿಂದಲೇ ಶೇ.2 ತುಟ್ಟಿಭತ್ಯೆ ಹೆಚ್ಚಳ ಹೌದು ರಾಜ್ಯ ಸರ್ಕಾರಿ ನೌಕರರಿಗೆ ಕಳೆದ ಜುಲೈ 1ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ.
ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸಿರುವ ಆದೇಶವು ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯ ವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮನವಿ ಮಾಡಿದ್ದರು.
ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಯನ್ನು ಮಂಜೂರು ಮಾಡುವುದು ಸಹ ಸಂಪ್ರದಾಯ ವಾಗಿರುತ್ತದೆ. ಹೀಗಾಗಿ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೋರಿದ್ದರು.
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆ ಯನ್ನು ಮಂಜೂರು ಮಾಡಿ ಆದೇಶಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..