ಶಿವಮೊಗ್ಗ –
ರಾಜ್ಯದಲ್ಲಿ 2 ಲಕ್ಷ ಹುದ್ದೆ ಖಾಲಿ ಇದ್ದರೂ ಕೂಡಾ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ನಮ್ಮ ರಾಜ್ಯದ ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡಿದ್ದಾರೆ.ರಾಜ್ಯದ ಸರ್ಕಾರಿ ನೌಕರರ ಹಿತಾಸಕ್ತಿ ರಕ್ಷಣೆಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಈಗಾಗಲೇ ಸರ್ಕಾರಿ ನೌಕರರಿಗೆ ಹಲವಾರು ಸೌಲಭ್ಯಗ ಳನ್ನು ನೀಡಲಾಗಿದೆ.ದೇಶದಲ್ಲೇ ರಾಜ್ಯ ಸರ್ಕಾರಿ ನೌಕರರು ದಕ್ಷ ಅಧಿಕಾರಿಗಳು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೆ ಹಲವಾರು ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಸರ್ಕಾರಿ ಅಧಿಕಾರಿಗಳು,ನೌಕರರ ಶ್ರಮವೂ ಕಾರಣ.ಈ ಪರಂಪರೆ ಮುಂದುವರಿಸುವ ಕರ್ತವ್ಯ,ನೈತಿಕ ಜವಾಬ್ದಾರಿ ನೌಕರರ ಮೇಲಿದೆ.ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿದು ಕೊಂಡರೆ ಕರ್ತವ್ಯಕ್ಕೆ ನ್ಯಾಯ ಒದಗಿಸಬಹುದು. ಕಾನೂನಿಗೆ ಅನುಗುಣವಾಗಿಯೇ ನಡೆದರೂ ಕೆಲವೊಮ್ಮೆ ವಿವೇಚನಾಧಿಕಾರ ಬಳಿಸಿ,ಬಡವರ ಶ್ರೇಯಕ್ಕೆ ಶ್ರಮಿಸ ಬೇಕು ಎಂದು ಕಿವಿಮಾತು ಹೇಳಿದರು.
ಆಳುವುದೇ ಬೇರೆ ಮತ್ತು ಆಡಳಿತ ಮಾಡುವುದೇ ಬೇರೆ. ಈ ಎರಡರ ನಡುವಿನ ವ್ಯತ್ಯಾಸ ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ಪಾತ್ರವನ್ನು ನಿಷ್ಠೆಯಿಂದ ನಿರ್ವಹಿಸಿದಲ್ಲಿ ನಾವು ಇಡೀ ರಾಜ್ಯದ ಜನರಿಗೆ ಅಭಿವೃದ್ಧಿಯ ಫಲ ನೀಡಲು ಸಾಧ್ಯ.ಆಡಳಿತ ಯಂತ್ರದಲ್ಲಿ ಬದಲಾವಣೆಯ ಅಗತ್ಯವಿದೆ. ಆಳುವ ರೀತಿಯನ್ನೂ ಬದಲಾಯಿಸಬೇಕಿದೆ ಎಂದರು.
ಜನಸಾಮಾನ್ಯರ ಬಳಿಗೆ ವ್ಯವಸ್ಥೆ ತೆಗೆದುಕೊಂಡು ಹೋಗ ಬೇಕಿದೆ.ಸರ್ಕಾರಿ ನೌಕರರು ಹಲವು ಒತ್ತಡಗಳು ಸಮಸ್ಯೆ ಗಳು ಮತ್ತು ಸವಾಲುಗಳ ನಡುವೆಯೂ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.