ಬೆಂಗಳೂರು –
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಹೌದು ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರಿಂದ ಸ್ವೀಕೃತವಾಗಿರುವ ದಿನಾಂಕ: 04.06.2025ರ ಉಲ್ಲೇಖಿತ ಪತ್ರದಲ್ಲಿ, ಪ್ರಸ್ತುತ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುತ್ತಿದ್ದು
ಈ ಸಂಬಂಧ ದಿನಾಂಕ: 12.05.2025 ರ ಆದೇಶ ದನ್ವಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿ ಗಳಾದ ತಾಂತ್ರಿಕ ಶಿಕ್ಷಣ ಇಲಾಖೆಯ ಉಪನ್ಯಾಸಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡುವಂತೆ ಕೋರಿದ್ದು ಈ ಒಂದು ವಿಚಾರ ಕುರಿತು ರಾಜ್ಯ ಸರ್ಕಾರ ಆದೇಶ ವನ್ನು ಮಾಡಿ ವಿನಾಯಿತಿ ಯನ್ನು ನೀಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..