ಬೆಂಗಳೂರು –
ರಾಜ್ಯದ 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಸರಕಾರವು ಆದೇಶಿಸಿದೆ.
ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ನಿಗದಿಪಡಿಸಿದ ವಸ್ತುನಿಷ್ಠ ಮಾನದಂಡಗಳು,ಅವಶ್ಯಕತೆಗಳು,ಸೌಲಭ್ಯ ಗಳ ಲಭ್ಯತೆ ಹಾಗೂ ಮಾರ್ಗಸೂಚಿಗಳ ಪ್ರಕಾರ ರಾಜ್ಯಾ ದ್ಯಂತ 79 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆ ಗಳನ್ನಾಗಿ ಉನ್ನತೀಕರಿಸಲು ಶಿಕ್ಷಣ ಇಲಾಖೆಯ ಆಯು ಕ್ತರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಸರಕಾರದ ಹಂತದಲ್ಲಿ ಪರಿಶೀಲನೆ ನಡೆಸಿ ಇನ್ನೂ ಕೆಲವು ಗ್ರಾಮಗಳಲ್ಲಿ ಪ್ರೌಢಶಾಲೆಗಳು ಇಲ್ಲದೆ ಇರುವುದರಿಂದ 100 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳ ನ್ನಾಗಿ ಉನ್ನತೀಕರಿಸುವ ಬಗ್ಗೆ ಆಯುಕ್ತರಿಂದ ವರದಿಯನ್ನು ಪಡೆಯಲಾಗಿತ್ತು.
ಅದರಂತೆ ಆರ್ಥಿಕ ಇಲಾಖೆಯು ಸಹಮತಿ ನೀಡಿದ ಬೆನ್ನಲ್ಲೇ 95 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆ ಗಳನ್ನಾಗಿ ಉನ್ನತೀಕರಿಸಲು ತೀರ್ಮಾನಿಸಲಾಗಿದ್ದು ಈ ಕೆಳಗಿನಂತೆ ಇವೆ.