This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

State News

ರಾಜ್ಯ ಸರ್ಕಾರಿ ನೌಕರರಿಗೆ ಜಾರಿಯಾಯಿತು ಪರಿಷ್ಕ್ರತ ವೇತನ -7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಪರಿಷ್ಕ್ರತಗೊಂಡಿತು ವೇತನ ಶ್ರೇಣಿ…..

ರಾಜ್ಯ ಸರ್ಕಾರಿ ನೌಕರರಿಗೆ ಜಾರಿಯಾಯಿತು ಪರಿಷ್ಕ್ರತ ವೇತನ -7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಪರಿಷ್ಕ್ರತಗೊಂಡಿತು ವೇತನ ಶ್ರೇಣಿ…..
WhatsApp Group Join Now
Telegram Group Join Now

ಬೆಂಗಳೂರು

ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ ಯೊಂದನ್ನು ರಾಜ್ಯ ಸರ್ಕಾರ ನೀಡಿದೆ ಹೌದು ಈಗಾಗಲೇ 7ನೇ ವೇತನ ಆಯೋಗವನ್ನು ಜಾರಿ ಮಾಡಲಾಗಿದ್ದು ಇದರ ಬೆನ್ನಲ್ಲೇ  ‘ಪರಿಷ್ಕೃತ ವೇತನ ಶ್ರೇಣಿ’ ಜಾರಿಗೊಳಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶವನ್ನು ಮಾಡಿದೆ

ಹೌದು ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಶ್ರೇಣಿಗಳನ್ನು ಪರಿಷ್ಕರಣೆ ಮಾಡಲಾಗಿದೆ.ಅಲ್ಲದೇ ಇತರೆ ಸಂಬಂಧಿತ ಆದೇಶಗಳನ್ನು ಹೊರಡಿಸಲಾಗಿದೆ.ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ನಡವಳಿಯನ್ನು ಹೊರಡಿಸಿ ದ್ದಾರೆ.

ಅದರಲ್ಲಿರಾಜ್ಯ ಸರ್ಕಾರದ ನೀತಿಯಂತೆ, 7ನೇ ರಾಜ್ಯ ವೇತನ ಆಯೋಗದ ಸಂಪುಟ ರಲ್ಲಿನ ಶಿಫಾರಸ್ಸುಗಳನ್ನು ಮೇಲೆ (1) ರಲ್ಲಿ ಓದಲಾದ ದಿನಾಂಕ 22.07.2024ರ ಸರ್ಕಾರಿ ಆದೇಶದಲ್ಲಿ ನಮೂದಿಸಿರುವಂತೆ ಅಂಗೀಕರಿ ಸಲಾಗಿರುತ್ತದೆ. ಅದರಂತೆ, ಸದರಿ ಆದೇಶದಲ್ಲಿ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾ ನಗೊಳಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ ಎಂದು ಉಲ್ಲೇಖ ಮಾಡಲಾಗಿದೆ.

ದಿನಾಂಕ 17.08.2024ರ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ನ್ನು ಅಧಿಸೂಚಿಸಲಾಗಿರುತ್ತದೆ. ಆದುದರಿಂದ, ಪರಿಷ್ಕೃತ ತ ವೇತನ ಶ್ರೇಣಿಯಲ್ಲಿ ವೇತನ ನಿಗದಿಪಡಿಸುವ, ಪಿಂಚಣಿ ಪರಿಷ್ಕರಣೆ ಮತ್ತು ವೇತನ ಸಂಬಂಧಿತ ಭತ್ಯೆಗಳ ಪರಿಷ್ಕರಣೆ ಕುರಿತಂತೆ ವಿಸ್ತೃತ ವಾದ ಆದೇಶಗಳನ್ನು ಹೊರಡಿಸುವುದು ಅಗತ್ಯವೆಂದು ಪರಿಗಣಿಸಲಾಗಿರುತ್ತದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk