ಬೆಂಗಳೂರು –
ಕರೋನ ಮಹಾಮಾರಿಯಿಂದ ನಿಲ್ಲಿಸಲಾಗಿದ್ದ ಎಲ್ಲಾ ಸೇವೆಯನ್ನು ಹಂತ ಹಂತವಾಗಿ ಸಡಿಸಲಾ ಗುತ್ತಿದ್ದು ಈಗ ರಾಜ್ಯ ಸರ್ಕಾರದ ಮುಜರಾಯಿ ವ್ಯಾಪ್ತಿಗೊಳಪಡುವ ದೇವಾಲಯ ಗಳಲ್ಲಿ ಜಾತ್ರೆ, ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಸೇವೆ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಹೌದು, ಕೋವಿಡ್ ಕಾರಣದಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ಸೇವೆಗಳಿಗೆ ಬ್ರೇಕ್ ಹಾಕಲಾಗಿತ್ತು. ಇದೀಗ ಕೋವಿಡ್ ನಿಯಮ ಪಾಲಿಸುವ ಷರತ್ತುಗೊಳಪಟ್ಟು ಮುಜರಾಯಿ ವ್ಯಾಪ್ತಿಗೊಳ ಪಡುವ ದೇವಾಲಯಗಳಲ್ಲಿ ಜಾತ್ರೆ, ಉತ್ಸವ, ರಥೋತ್ಸವ, ಬ್ರಹ್ಮರಥೋತ್ಸವ, ವಿಶೇಷ ಪೂಜೆ, ಪ್ರಸಾದ ವಿತರಣೆ, ಅನ್ನದಾಸೋಹ ಸೇರಿದಂತೆ ವಿವಿಧ ಧಾರ್ಮಿಕ ಸೇವೆ ನಡೆಸಲು ರಾಜ್ಯ ಸರ್ಕಾರ ಅಸ್ತು ಎಂದಿದೆ.

ಭಕ್ತರ ಭಾವನೆಗೆ ಧಕ್ಕೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಮುಜರಾಯಿ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ಧಾರ್ಮಿಕ ದತ್ತಿ ಇಲಾಖೆ ಆದೇಶ ನೀಡಿದೆ.ಹಾಗೂ ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸುತ್ತೋಲೆ ಹೊರಡಿಸಲಾಗಿದೆ.