ಬೆಂಗಳೂರು –
ರಾಜ್ಯದ ಶಿಕ್ಷಕ ಸಂಘದ ಜೊತೆ ಚರ್ಚೆ ಮಾಡಿದ್ದು ಹಲವು ಸಮಸ್ಯೆ ಹೇಳಿದ್ದಾರೆ.ಸರ್ಕಾರಕ್ಕೆ ಸಮಸ್ಯೆಗಳ ಅರಿವಾಗಿದೆ ಆದಷ್ಟು ಶೀಘ್ರವೇ ಶಿಕ್ಷಕರ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ಇದೇ ವೇಳೆ ತಮ್ಮ ಬಾಲ್ಯದ ನೆನಪು ಮಾಡಿಕೊಂಡ ಸಿಎಂ,ನನಗೆ ಶಿಕ್ಷಕರು ಕಂಡರೆ ಅಪಾರಗೌರವ ಇದೆ. ನನಗೆ ರಾಜಪ್ಪ ಮೇಷ್ಟ್ರು ಕಂಡರೆ ಇಷ್ಟ. ನಾನು 1 ರಿಂದ 4ನೇ ತರಗತಿ ಓದಿರಲಿಲ್ಲ.ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ಸೇರಿಸಿದ್ರು.ಅಂತಹ ಶಿಕ್ಷಕರು ಇರಬೇಕು ಎಂದರು.
ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ಡಾ ರಾಧಾಕೃ ಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾ ಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿ ಸಬೇಕು ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತೀ ಹೆಚ್ಚಾ ಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡ ವರ ಬಗ್ಗೆ ನನಗೆ ಹೆಮ್ಮೆ ಅನ್ನಿಸುತ್ತದೆ ಎಂದರು.
ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ.ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ.ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ.ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು.
ಇದೇ ವೇಳೆ ಪ್ರಶಸ್ತಿ ವಿಜೇತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಯಿತು.ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಯಶಸ್ವಿಯಾಗಿ ನಡೆಯಿತು.
ಸಾವಿತ್ರಿ ಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿ ಯಾಗಲಿ ಎಂಬ ಮಾತುಗಳು ಕೂಡಾ ಕಾರ್ಯಕ್ರಮ ದಲ್ಲಿ ಕೇಳಿ ಬಂದವು.
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು,ಶಾಸಕ ಎನ್ ಹೆಚ್ ಕೋನರೆಡ್ಡಿ ಸೇರಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಕರ ಮತ್ತು ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಗಳು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..