ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ನೀಡುವ ವಿಚಾರ ಕುರಿತಂತೆ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ಪರವಾಗಿ ರಾಜ್ಯಾಧ್ಯಕ್ಷ ಪವಾಡೆಪ್ಪ ಅವರು ಅಭಿನಂದನೆ ಗಳನ್ನು ಸಲ್ಲಿಸಿದ್ದಾರೆ.
ಸುದ್ದಿ ಸಂತೆಯೊಂದಿಗೆ ಮಾತನಾಡಿದ ಅವರು ಕಳೆದ ಕೆಲ ದಿನಗಳಿಂದ ರಾಜ್ಯದ ಸರ್ಕಾರಿ ನೌಕರರು ಕಾಯುತ್ತಿದ್ದ ಈ ಒಂದು ಬೇಡಿಕೆಗಳಿಗೆ ಮುಖ್ಯಮಂತ್ರಿಯವರು ಸ್ಪಂದಿಸಿ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಗುಡ್ ನ್ಯೂಸ್ ನೀಡಿದ್ದು ಇದು ಸಂತೋಷದ ವಿಚಾರವಾಗಿದೆ ಎಂದಿದ್ದಾರೆ.
ಇನ್ನೂ ಈ ಒಂದು ವಿಚಾರ ಕುರಿತಂತೆ ಹಗಲಿ ರುಳು ಶ್ರಮಿಸಿದ ಮತ್ತು ಮುಖ್ಯಮಂತ್ರಿ ಸೇರಿ ದಂತೆ ಸರ್ಕಾರಕ್ಕೆ ಮೇಲಿಂದ ಮೇಲೆ ಒತ್ತಡವನ್ನು ಹಾಕಿ ಜಾರಿಗೆ ಮಾಡಲು ಪ್ರಯತ್ನ ಮಾಡಿರುವ ಸಮಸ್ತ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರಿಗೂ ಕೂಡಾ ಗ್ರಾಮೀಣ ಪ್ರೌಢ ಶಾಲಾ ಶಿಕ್ಷಕರ ಸಂಘದ ಪರವಾಗಿ ತುಂಬು ಹೃದಯದ ಅಭಿನಂದನೆ ಗಳನ್ನು ಸಲ್ಲಿಸಿದ್ದಾರೆ.
ಈ ಸಮಿತಿ ಕೂಡಲೇ ವರದಿಯನ್ನು ಸಿದ್ದ ಮಾಡಿ ಸರ್ಕಾರಕ್ಕೆ ಸಲ್ಲಿಸಲಿ ಎಂಬ ಒತ್ತಾಯವನ್ನು ಮಾಡಿದ್ದಾರೆ.ಇದರೊಂದಿಗೆ ರಾಜ್ಯದ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ನೀಡು ವಂತೆ ಆಗ್ರಹವನ್ನು ಮಾಡಿದ್ದಾರೆ.ರಾಜ್ಯಾಧ್ಯಕ್ಷ ಪವಾಡೆಪ್ಪ ಅವರೊಂದಿಗೆ ಸಂಘದ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಬಡಿಗೇರ, ಕಾರ್ಯಾಧ್ಯಕ್ಷ ಕೆ ಬಿ ಕುರಹಟ್ಟಿ, ಕೋಶಾಧ್ಯಕ್ಷರಾಗಿ ರುವ ಜಗದೀಶ್ ತೊಟಗೇರಿ ಮತ್ತು ರಾಜ್ಯದ ಪದಾಧಿಕಾರಿಗಳು ಮತ್ತು ಸಂಘದ ಸರ್ವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವರದಿ – ಮಂಜುನಾಥ ಬಡಿಗೇರ ಜೊತೆ ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್ ಬೆಂಗಳೂರು .