ಬೆಂಗಳೂರು –
7ನೇ ವೇತನ ಆಯೋಗದ ಕುರಿತಂತೆ ಕಂಪ್ಲೀಟ್ ಮಾಹಿತಿ ನೀಡಿದ ರಾಜ್ಯಾಧ್ಯಕ್ಷ ಷಡಾಕ್ಷರಿಯವರು ರಾಜ್ಯ ಸರ್ಕಾರಿ ನೌಕರರ ಪರವಾಗಿ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ ರಾಜ್ಯಾಧ್ಯಕ್ಷರು….. ಸುದ್ದಿ ಸಂತೆ ಯೊಂದಿಗೆ ಮಾತನಾಡಿ ವಿವರಣೆ ನೀಡಿದ್ದಾರೆ ನೋಡಿ…..
ರಾಜ್ಯದ ಸರ್ಕಾರಿ ನೌಕರರು ಕಳೆದ ಕೆಲ ದಿನಗಳಿಂದ ನಿರೀಕ್ಷೆ ಮಾಡುತ್ತಿದ್ದ 7ನೇ ವೇತನ ಆಯೋಗಕ್ಕೆ ಸಚಿವ ಸಂಪುಟ ಸಭೆ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ.ಹೌದು ರಾಜ್ಯ ಸರ್ಕಾರಿ ನೌಕರರು ಹೋರಾಟಕ್ಕೆ ಕರೆ ಕೊಟ್ಟ ಬೆನ್ನಲ್ಲೇ ಇನ್ನೇನು ದೊಡ್ಡ ಪ್ರಮಾಣದಲ್ಲಿ ಹೋರಾಟ ಆರಂಭವಾಗುತ್ತದೆ ಎಂದುಕೊಂಡಿದ್ದ ಮುಖ್ಯ ಮಂತ್ರಿಯವರು ತುರ್ತು ಸಚಿವ ಸಂಪುಟದ ಸಭೆಯನ್ನು ಕರೆದಿದ್ದರು.
ಈ ಒಂದು ಸಭೆಯಲ್ಲಿ ಕೊನೆಗೂ ರಾಜ್ಯ ಸಚಿವ ಸಂಪುಟದ ಸಭೆ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಶುಭ ಸುದ್ದಿಯನ್ನು ನೀಡಿದೆ.ಎರಡು ವರ್ಷಗಳಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ನಿರೀಕ್ಷೆಯನ್ನು ಮಾಡುತ್ತಿದ್ದ 7ನೇ ವೇತನ ಆಯೋಗಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.ಅತ್ತ ಸಭೆಯಲ್ಲಿ ರಾಜ್ಯ 7ನೇ ವೇತನ ಆಯೋಗಕ್ಕೆ ಒಪ್ಪಿಗೆ ನೀಡುತ್ತಿದ್ದಂತೆ.
ಇತ್ತ ಈ ಒಂದು ಸಂಬಂಧಪಟ್ಟಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯವರು ಈ ಒಂದು ಕುರಿತಂತೆ ಮಾಹಿತಿಯನ್ನು ನೀಡಿದ್ದಾರೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 1-7- 22 ರಿಂದ ಕಾಲ್ಪನಿಕ ವಾಗಿ ವೇತನ ನಿಗದಿ, 1-8- 24 ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸು ಮಾಡಿದ 27.50% ವೇತನ ವೇತನ ನಿಗದಿ ಮಾಡಿದ್ದು
ರಾಜ್ಯ ಸರ್ಕಾರಕ್ಕೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಷಡಾಕ್ಷರಿಯವರು ಧನ್ಯವಾದಗಳನ್ನು ಹೇಳಿದ್ದಾರೆ.ಅಲ್ಲದೇ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದು ಸಂತೋಷದ ವಿಚಾರವಾಗಿದೆ ಎಂದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..