ಬೆಂಗಳೂರು –
ಜಿಎಸ್ ಟಿ, ಇಂಧನ ದರ ಏರಿಕೆ ಸೇರಿದಂತೆ ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಾಗೇ ಕೆಲವನ್ನು ವಿರೋಧಿಸಿ ವರ್ತಕರ ಸಂಘಟನೆ ನಾಳೆ ಲಾರಿ ಮುಷ್ಕರಕ್ಕೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಬಂದ್ ಆಗಲಿದೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿಸಿ ವರ್ತಕರ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಫೆಬ್ರವರಿ 26 ರಂದು ದೇಶಾದ್ಯಂತ ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿವೆ. ರಾಜ್ಯದಲ್ಲೂ ಲಾರಿ ಸಂಚಾರ ಬಂದ್ ಆಗಲಿವೆ.ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಲಾರಿ ಸಂಚಾರ ಇರಲ್ಲ ಎಂದರು