ಮಂಡ್ಯ –
ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ಮಾಡಿದ ಘಟನೆ ಮಂಡ್ಯ ದಲ್ಲಿ ನಡೆದಿದೆ.ಹೌದು ಜಿಲ್ಲೆ ಕೆ. ಆರ್ ಪೇಟೆ ತಾಲೂಕಿನ ಕುರುಬಹಳ್ಳಿ ಶಾಲೆಯಲ್ಲಿ ಸುಮಾರು 8 ವರ್ಷಗಳಿಂದ ಶಿಕ್ಷಕರಾಗಿ ಕರ್ತವ್ಯ ನಿರ್ವಹಿ ಸುತ್ತಿದ್ದ ಉದಯ್ ಕುಮಾರ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ.ಇದನ್ನು ಖಂಡಿಸಿ ಮಕ್ಕಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.ತಮ್ಮ ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿದ ಮಕ್ಕಳು ಮತ್ತು ಗ್ರಾಮಸ್ಥರು ಪ್ರತಿಭಟನೆ ಮಾಡಿದರು ಕುರುಬಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಬಳಿ ನಡೆದಿದೆ.
ಶಿಕ್ಷಕ ಉದಯ್ ಅವರನ್ನು ಮತ್ತೆ ನಮ್ಮ ಶಾಲೆಗೆ ಮರು ವರ್ಗಾಯಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು ಶಿಕ್ಷಕ ಮರಳಿ ಬರುವವರೆಗೂ ಉಪವಾಸ ಸತ್ಯಾಗ್ರಹಕ್ಕೂ ಸಿದ್ಧ ಎಂದು ಗ್ರಾಮಸ್ಥರು ಎಚ್ಚರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಮ್ಮ ಊರಿನ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಇಲ್ಲದೆ ಮುಚ್ಚುವ ಸ್ಥಿತಿಯಲ್ಲಿತ್ತು.ಆ ಸಂದರ್ಭದಲ್ಲಿ ನಮ್ಮ ಗ್ರಾಮದ ಮಕ್ಕಳಿಗೆ ಜ್ಞಾನಭಂಡಾರದಂತೆ ಸಂಸ್ಕೃತಿಯ ಬಗ್ಗೆ ಹಾಗು ಶಿಕ್ಷಣದ ಬಗ್ಗೆ ಅರಿವು ಮೂಡಿಸಿದ್ದರು. ಪ್ರಾಮಾಣಿಕ ಕರ್ತವ್ಯ ಜೊತೆಗೆ ನಮ್ಮ ಗ್ರಾಮದ ಮಕ್ಕಳಿಗೆ ಉತ್ತಮ ಶೈಕ್ಷಣಿಕ ಶಿಕ್ಷಣ ನೀಡುತ್ತಿದ್ದ ಶಿಕ್ಷಕರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಖಂಡಿಸಿದರು.ಇನ್ನೂ ತಕ್ಷಣ ವೇ ಶಿಕ್ಷಕರನ್ನು ನಮ್ಮ ಊರಿಗೆ ವರ್ಗಾವಣೆ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.