ಹುಬ್ಬಳ್ಳಿ –
ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷಕ್ಕೆ ಉನ್ನತೀಕರಿಸಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಐಟಿಐ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.ಮಿನಿ ವಿಧಾನಸೌಧದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇಲಾಖೆಯ ಹಿಂದಿನ ಆದೇಶದಂತೆ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷಕ್ಕೆ ಉನ್ನತೀಕರಿಸಲು ಹಾಗೂ ಏಕಾಏಕಿ ಪರೀಕ್ಷಾ ಶುಲ್ಕವನ್ನು ತುಂಬಲು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಇಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಒ) ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಿದರು.
