ಕಲಬುರಗಿ –
ಬಿಸಿಯೂಟ ಸೇವಿಸಿ 8ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಅಸ್ವಸ್ಥಗೊಂಡ ಘಟನೆ ಕನಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಧ್ಯಾಹ್ನದ ವೇಳೆ ಅನ್ನ ಸಾಂಬಾರ್ ಸೇವಿಸಿದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕೆಲ ಕ್ಷಣದಲ್ಲಿ ವಾಂತಿ, ತಲೆ ಸುತ್ತು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ.
ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮೇಲ್ನೋಟಕ್ಕೆ ಫುಡ್ ಪಾಯ್ಸನ್ ಆಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ವಿದ್ಯಾರ್ಥಿಗಳಿಗೆ ಕೊಲ್ಲೂರು ಆರೋಗ್ಯ ಕೇಂದ್ರ ದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಮೊನ್ನೆಯಷ್ಟೇ ಜಿಲ್ಲೆಯ ಜೇವರ್ಗಿ ತಾಲೂಕಿನ ಸರ್ಕಾರಿ ವಸತಿ ಶಾಲೆಯಲ್ಲೂ ಇದೇ ರೀತಿ ಘಟನೆ ಸಂಭವಿಸಿದ್ದು ಆಗ 17ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದರು.
ಸುದ್ದಿ ಸಂತೆ ನ್ಯೂಸ್ ಕಲಬುರಗಿ…..