ಚಿತ್ರದುರ್ಗ –
ಶಾಲೆಯಲ್ಲಿ ಊಟ ಮಾಡಿದ ನಂತರ 15 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥತರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ.ಹೌದು ಚಿತ್ರದುರ್ಗ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಸಧ್ಯ ಅದರಲ್ಲಿ ಕೆಲವು ವಿದ್ಯಾರ್ಥಿಗಳು ಗುಣಮುಖ ರಾಗಿದ್ದಾರೆ.
ಹೊಳಲ್ಕೆರೆಯ ಮೊರಾರ್ಜ ವಸತಿಯ ಶಾಲೆಯಲ್ಲಿ ರಾತ್ರಿ ಊಟ ಸೇವನೆಯ ಬಳಿಕ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು 15 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಬೇದಿಯಾಗಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.ಸದ್ಯ ವಿದ್ಯಾರ್ಥಿಗಳನ್ನು ಹೊಳಲ್ಕೆರೆಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ ಕೆಲವರು ಗುಣಮುಖರಾಗಿ ಬಂದಿದ್ದು ಇನ್ನೂ ಕೆಲವರು ಇದ್ದಾರೆ ಈ ಮಧ್ಯೆ ಬೆಡ್ ಇಲ್ಲದೆ ಮಕ್ಕಳನ್ನು ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.