ಬೆಳಗಾವಿ –
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಉಪಮುಖ್ಯಮಂತ್ರಿ ಗಳಾದ ಗೋವಿಂದ ಕಾರಜೋಳ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹಾಗೂ ಪಕ್ಷದ ಇತರೆ ಮುಖಂಡ ರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು
ಕೇಂದ್ರದ ಮಾಜಿ ಸಚಿವರಾದ ದಿವಂಗತ ಸುರೇಶ್ ಅಂಗಡಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಡಿದ ಜನಪರ ಕಾರ್ಯಗಳನ್ನು ಮುಂದುವರಿಸ ಲು ಹಾಗೂ ಕ್ಷೇತ್ರದ ಜನರ ಕಲ್ಯಾಣಕ್ಕಾಗಿ ಶ್ರಮಿಸಲು ಸರ್ವ ಮತದಾರ ಬಾಂಧವರು ನನ್ನ ಪ್ರತಿ ಹೆಜ್ಜೆಯ ಲ್ಲೂ ಪ್ರೀತಿ, ಪ್ರೋತ್ಸಾಹ, ಸಹಕಾರ, ಆಶೀರ್ವಾದ ಮಾಡಿ ಹರಸಲಿದ್ದೀರಿ ಎಂಬ ವಿಶ್ವಾಸವಿದೆ ಎಂದಿದ್ದಾ ರೆ ಮಂಗಲಾ ಅಂಗಡಿ ಯವರು.
ಈ ಒಂದು ಸಂದರ್ಭದಲ್ಲಿ ಶಾಸಕರಾದ ಅಭಯ್ ಪಾಟೀಲ ಅನಿಲ್ ಬೆನಕೆ, ದುರ್ಯೋಧನ ಐಹೊಳೆ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.