ಉಡುಪಿ –
ಕೇಂದ್ರ ಮತ್ತು ರಾಜ್ಯ ಸರಕಾರಿ ವೇತನದಲ್ಲಿನ ವ್ಯತ್ಯಾಸ ಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಬಹು ಬೇಡಿಕೆಯ 7ನೆ ವೇತನ ಆಯೋಗವು 2022ರ ಜುಲೈ ತಿಂಗಳಲ್ಲಿ ಜಾರಿಯಾಗಲಿದೆ.ಈ ಬಗ್ಗೆರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹೇಳಿದರು.ಉಡುಪಿಯ ಹೋಟೆಲ್ ಮಣಿಪಾಲ ಇನ್‌ನಲ್ಲಿ ರವಿವಾರ ನಡೆದ ಜಿಲ್ಲಾ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯು ಶೀಘ್ರದಲ್ಲಿ ಜಾರಿಯಾಗಲಿದ್ದು ಏಳನೆ ವೇತನ ಆಯೋಗ ಜಾರಿ ನಂತರ ಎನ್‌ಪಿಎಸ್ ರದ್ದುಗೊಳಿ ಸುವ ಕುರಿತಂತೆ ಸಂಘ ಕಾಯೋನ್ಮುಖವಾಗಲಿದ್ದು ಸರ ಕಾರಿ ನೌಕರರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ಸಂಘವು ಸದಾ ಬದ್ದವಾಗಿದೆ ಎಂದರು.ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿದರು. ರಾಜ್ಯ ಪರಿಷತ್ ಸದಸ್ಯ ಕಿರಣ್ ಹೆಗ್ಡೆ ವಂದಿಸಿದರು.ದಯಾನಂದ ಮತ್ತು ಮಂಜುಳಾ ಜಯಕರ್ ಕಾರ್ಯಕ್ರಮ ನಿರೂಪಿಸಿದರು.