ಬೆಂಗಳೂರು –
ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡುಗಳು ದೊರೆಯುವಂತೆ ಮಾಡಬೇಕು.ಆರು ತಿಂಗಳ ಲ್ಲಿ ರಾಜ್ಯದ ಎಲ್ಲರಿಗೂ ಈ ಕಾರ್ಡ್ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಆಯುಷ್ಮಾನ್ ಭಾರತ್ ದಿನ ಅಂಗ ವಾಗಿ ಸಚಿವ ಡಾ.ಕೆ.ಸುಧಾಕರ್ ಅವರು ಆರೋಗ್ಯ ಮಂಥನ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವೈದ್ಯರು,ಸಿಬ್ಬಂದಿ ಹಾಗೂ ವಿವಿಧ ಯೋಜನೆಗಳ ಫಲಾನು ಭವಿಗಳೊಂದಿಗೆ ಚರ್ಚೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಕಾರ್ಡ್ ಮೂಲಕ ಜನರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.ಈ ಕಾರ್ಡ್ ಎಲ್ಲರಿಗೂ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.
ಹೂವಿನ ಹಡಗಲಿಯ ಮೈಲಾರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ವರ್ಷದ ಪ್ರಸನ್ನ ಮಾತನಾಡಿ 10 ವರ್ಷದಿಂದ ಬಿಪಿ ಹಾಗೂ ಮಧುಮೇಹ ವಿದ್ದು,ದಾವಣಗೆರೆ, ಹಾವೇರಿ ಮೊದಲಾದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ.ಈಗ ನಮ್ಮ ಊರಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲೇ ಚಿಕಿತ್ಸೆ ಪಡೆಯುತ್ತಿ ದ್ದೇನೆ. ಪ್ರತಿ ತಿಂಗಳು ಉಚಿತವಾಗಿ ಮಾತ್ರೆ ದೊರೆಯುತ್ತಿದ್ದು ಮಧುಮೇಹ ನಿಯಂತ್ರಣಕ್ಕೆ ಬಂದಿದೆ ಎಂದರು.
ಆಹಾರ ಮತ್ತು ವ್ಯಾಯಾಮ ಕುರಿತು ಮಾರ್ಗದರ್ಶನ ದೊರೆತಿದೆಯೇ ಎಂದು ಸಚಿವ ಡಾ.ಕೆ.ಸುಧಾಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸನ್ನ ಪ್ರತಿ ದಿನ ವಾಕಿಂಗ್ ಹಾಗೂ ವ್ಯಾಯಾಮ ಮಾಡಲು ಮಾರ್ಗದರ್ಶನ ದೊರೆತಿದೆ. ಯೋಗವನ್ನೂ ಮಾಡುತ್ತಿದ್ದೇನೆ ಎಂದರು.