ಬೆಂಗಳೂರು –
ಘೋಷಣೆಯಾಯಿತು ರಾಜ್ಯದ ಶಾಲೆಗಳಿಗೆ ಬೇಸಿಗೆ ರಜೆ – ಏಪ್ರೀಲ್ 11 ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಹೌದು
ರಾಜ್ಯದ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಬೇಸಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.ಹೌದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಲಾಖೆ ಬೇಸಿಗೆ ರಜೆಯನ್ನು ಘೋಷಣೆ ಮಾಡಿದೆ. ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬೇಸಿಗೆ ರಜೆ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಯು ಮಹತ್ವದ ಆದೇಶ ಹೊರಡಿಸಿದೆ.
ಶಾಲೆಗಳಿಗೆ ಏಪ್ರಿಲ್ 11ರಿಂದ ಮೇ 28ರವರೆಗೆ ಬೇಸಿಗೆ ರಜೆಯನ್ನು ಶಾಲಾ ಶಿಕ್ಷಣ ಇಲಾಖೆ ಘೋಷಿಸಿದೆ.ಶಾಲಾ ಶಿಕ್ಷಣ ಇಲಾಖೆಯ ಆದೇಶ ದಂತೆ ಶಾಲೆಗಳಿಗೆ ಏಪ್ರಿಲ್ 11ರಿಂದ ಮೇ 28 ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದ್ದು ಮೇ 29ರಿಂದ ಶಾಲೆಗಳು ಆರಂಭವಾಗಲಿವೆ.
ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಶೈಕ್ಷಣಿಕ ಮಾರ್ಗದರ್ಶಿ 2023-24ರ ಪ್ರಕಾರ ಹಾಲಿ ಶೈಕ್ಷಣಿಕ ವರ್ಷದ 1ನೇ ತರಗತಿಯಿಂದ 9ನೇ ತರಗತಿವರೆಗಿನ ವಾರ್ಷಿಕ ಪರೀಕ್ಷೆ ಮುಗಿದ ಬಳಿಕ ಏಪ್ರಿಲ್ 1ರಿಂದ 5ರ ನಡುವೆ ಮೌಲ್ಯಮಾ ಪನ ಕಾರ್ಯ ನಡೆಯಲಿದೆ.
ಏಪ್ರಿಲ್ 8ರಂದು ಪ್ರಾಥಮಿಕ ಶಾಲಾ ತರಗತಿಗಳ ಫಲಿತಾಂಶ ಪ್ರಕಟವಾಗಲಿದೆ.ಏಪ್ರಿಲ್ 10ರಂದು 8 ಮತ್ತು 9ನೇ ತರಗತಿ ಫಲಿತಾಂಶ ಪ್ರಕಟವಾಗ ಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……