ಬೆಂಗಳೂರು –
ಶಿಕ್ಷಕರ ವರ್ಗಾವಣೆ ವಿಚಾರ ಕುರಿತು ಚುರುಕುಗೊ ಳಿಸಲು ಅಧಿಕಾರಿಗಳಿಗೆ ಹೇಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿ ನಲ್ಲಿ ಮಾತನಾಡಿದ ಅವರು ಈಗಾಗಲೇ ಶಿಕ್ಷಕರ ವರ್ಗಾವಣೆ ಬಹಳ ತಡವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸ ಲು ಸೂಚಿಸಲಾಗಿದೆ ಎಂದರು.

ಲಾಕ್ ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂ ಭಿಸಬೇಕೆಂದು ನಿರ್ದೇಶನ ನೀಡಲಾಗಿದೆ ಎಂದರು. ಶಿಕ್ಷಕರು ಇಲಾಖೆಯಿಂದ ತುಂಬಾ ನಿರೀಕ್ಷೆಯಿಟ್ಟು ಕೊಂಡಿದ್ದಾರೆ.ಅವರಿಗೆ ನೀಡಿದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದರು. ಇನ್ನೂ ಪ್ರಮುಖ ವಾಗಿ ಇದರಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದೆಂದು ಸೂಚಿಸಲಾಗಿದೆ ಹೀಗಾಗಿ ಈ ಒಂದು ಪ್ರಕ್ರಿಯೆ ಯನ್ನು ಕೂಡಲೇ ಆರಂಭ ಮಾಡಿ ಚುರುಕುಗೊಳಿಸಲು ಅಧಿಕಾರಿಗಳಿಗೆ ಹೇಳಲಾಗಿದೆ ಎಂದು ಸಚಿವರು ತಿಳಿಸಿದರು ಇದರೊಂದಿಗೆ ಕಳೆದ ಹಲವು ವರ್ಷಗಳಿಂದ ತುಂಬಾ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ.