ಮುಖ್ಯ ಶಿಕ್ಷಕ ಅಮಾನತು – ಕರ್ತವ್ಯ ಲೋಪ ಹಿನ್ನಲೆಯಲ್ಲಿ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರು ಅಮಾನತು…..

Suddi Sante Desk
ಮುಖ್ಯ ಶಿಕ್ಷಕ ಅಮಾನತು – ಕರ್ತವ್ಯ ಲೋಪ ಹಿನ್ನಲೆಯಲ್ಲಿ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರು ಅಮಾನತು…..

ರಾಯಚೂರು

ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕ ಸೇರಿದಂತೆ ಇಬ್ಬರನ್ನೂ ಅಮಾನತು ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.ತಾಲ್ಲೂಕಿನ ಅಪ್ಪನದೊಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 49 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಅಕ್ಷರ ದಾಸೋಹ ಯೋಜನೆ ತಾಲ್ಲೂಕು ಸಹಾಯಕ ನಿರ್ದೇಶಕಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಜುಲೈ 1ರಂದು ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿದ್ದರು.ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಘಟನೆ ಯಿಂದಾಗಿ ಪಾಲಕರು ತೀವ್ರ ಆತಂಕಕ್ಕೀಡಾ ಗಿದ್ದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದ ಅಕ್ಷರ ದಾಸೋಹ ಯೋಜನೆಯ ತಾಲ್ಲೂಕು ಸಹಾಯಕ ನಿರ್ದೇಶಕಿ ಮಂಜುಳಾ ಮತ್ತು ಮುಖ್ಯ ಶಿಕ್ಷಕ ಕನಕಪ್ಪ ಅವರನ್ನು ಅಮಾನತುಗೊಳಿಸಿದೆ.

ಘಟನೆ ಸಂಬಂಧ ತನಿಖೆ ನಡೆಸುವಂತೆ ಸಚಿವರು ಶಾಸಕರು ಸೂಚನೆ ನೀಡಿದ್ದರು.ಅದರಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿ ವರದಿ ಯನ್ನು ನೀಡಿದ್ದು ಅದನ್ನು ಆಧರಿಸಿ ಜಿಲ್ಲಾಡಳಿತ ಇಬ್ಬರ ವಿರುದ್ಧ ಕ್ರಮಕೈಗೊಂಡಿದೆ.

ಸುದ್ದಿ ಸಂತೆ ನ್ಯೂಸ್ ರಾಯಚೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.