ಶಿವಮೊಗ್ಗ –
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರೊಬ್ಬರನ್ನು ಸಸ್ಪೆಂಡ್ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಸಾಗರ ತಾಲೂಕು ಖಂಡಿಕ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ, ಹಂಸಗಾರು, ಗಿಳಿಗಾರು ಗ್ರಾಮದಲ್ಲಿ ಆಕೆಶಿಯಾ ಮರಗಳ ಅಕ್ರಮ ಕಡಿತಲೆ, ಸಾಗಣೆ ವಿಷಯದಲ್ಲಿ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ತಾಳಗುಪ್ಪದ ಉಪ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಅರಣ್ಯ ರಕ್ಷಣೆಗೆ ಮುಂಜಾಗ್ರತೆ ಕ್ರಮ ವಹಿಸುವಲ್ಲಿ ವಿಫಲವಾಗಿದ್ದು ಅಲ್ಲದೆ ಬೇಜವಾಬ್ದಾರಿ ಮತ್ತು ಕರ್ತವ್ಯ ಲೋಪ ಸೇರಿದಂತೆ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ತನಿಖಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾ ಗಿದೆ
ಮರಗಳ ಅಕ್ರಮ ಕಡಿತಲೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ದಾಖಲೆಗಳೊಂದಿಗೆ ವರದಿ ಸಲ್ಲಿಸಲು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರ್ದೇಶಿಸಿ ದ್ದರು ಸಮಗ್ರ ತನಿಖೆ ನಡೆಸಿ ಕರ್ತವ್ಯಲೋಪ ಕಂಡು ಬಂದ ಹಿನ್ನಲೆಯಲ್ಲಿ ಸಂತೋಷ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಅಮಾನತು ಅವಧಿಯಲ್ಲಿ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಸೂಚಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..