ಸಾಗರ –
ಹೌದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಶಿವಮೊಗ್ಗ ಗ ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿಯ ಮರತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಅವ ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಚಂದ್ರಶೇ ಖರ್ ಅವರು ಕೆಲವು ದಿನಗಳಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೋಷಕರು ಶಾಲಾಭಿ ವೃದ್ಧಿ ಸಮಿತಿಗೆ ದೂರು ನೀಡಿದ್ದರು.ಎಸ್‌ಡಿಎಂಸಿಯ ಪ್ರಮುಖರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಈ ಬಗ್ಗೆ ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್ ಅವರು ಶಾಲೆಗೆ ಭೇಟಿ ನೀಡಿ ಪೋಷಕರು ಹಾಗೂ ವಿದ್ಯಾರ್ಥಿನಿಯರನ್ನು ವಿಚಾರಿ ಸಿದಾಗ ಶಿಕ್ಷಕ ಚಂದ್ರಶೇಖರ್ ಅವರು ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟಿತ್ತು.ಹೀಗಾಗಿ ಅವರನ್ನು ಸೇವೆ ಯಿಂದ ಅಮಾನತುಗೊಳಿಸಲಾಗಿದೆ.