ಕುಂದಗೋಳ –
ಧಾರವಾಡ ಜಿಲ್ಲೆಯ ಕುಂದಗೋಳದಲ್ಲೂ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಣೆ ಮಾಡಲಾಯಿತು. ಪಟ್ಟಣದ ಮಂಡಲದ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿಯನ್ನು ವಿಶೇಷವಾಗಿ ಆಚರಣೆ ಮಾಡಲಾಯಿತು.

ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಮಾಡಲಾಯಿತು.ಪಕ್ಷದ ಮುಖಂಡರು ಕಾರ್ಯಕರ್ತರು ಸಾರ್ವಜನಿಕರು ಈ ಒಂದು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಪರೀಕ್ಷೆ ಮಾಡಿಸಿಕೊಂಡರು.

ವೇದ ಮೂರ್ತಿ ಶ್ರೀ ಅಡವಯ್ಯನವರು,ಯುವ ಮೋರ್ಚಾ ಮಂಡಲ ಅಧ್ಯಕ್ಷ ಬಸವರಾಜ ಚಿಕ್ಕಹರಕುಣಿ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಭರಮಗೌಡ ದ್ಯಾಮನಗೌಡ್ರ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಸಂತೋಷ ಹಿರೇಗೌಡ್ರ,ಗುರು ಭದ್ರಾಪೂರ,

ಓಬಿಸಿ ಮೋರ್ಚಾ ತಾಲೂಕಾಧ್ಯಕ್ಷರಾದ ಮಂಜುನಾಥ ನಾಗಶೆಟ್ಟಿ, ಡಾಕ್ಟರ್ ಇನಾಮದಾರ, ನಿಂಗನಗೌಡ್ರ ಪಾಟೀಲ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಕೋಳಿವಾಡ,ರಮೇಶ ಬೆನಕಣ್ಣವರ ಹಾಗೂ ಎಲ್ಲಾ ಪದಾಧಿಕಾರಿಗಳು ಗ್ರಾಮದ ಯುವ ಮಿತ್ರರು ಪಾಲ್ಗೊಂಡಿದ್ದರು.
