ಯಾದಗಿರಿ –
ತಹಶೀಲ್ದಾರರೊಬ್ಬರು ಲಂಚ ಸ್ವೀಕರಿಸುವಾಗ ACB ಬಲೆಗೆ ಬಿದ್ದ ಘಟನೆ ಯಾದಗಿರಿ ಯಲ್ಲಿ ನಡೆದಿದೆ. ಸರ್ಕಾರಿ ಕೆಲಸ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಹಶೀಲ್ದಾರ್ ಸಂಗಮೇಶ್ ಜಿಡಗೆ ಎಸಿಬಿ ಬಲೆಗೆ ಬಿದ್ದ ತಹಶೀಲ್ದಾರ ಆಗಿದ್ದಾರೆ.ಜಮೀನು ಪಾಲು ವಿಚಾರಕ್ಕೆ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಅದರ ಮುಂಗಡವಾಗಿ ಇಂದು ಐದು ಸಾವಿರ ರೂಪಾಯಿ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಸಂಗಮೇಶ್ ನನ್ನು ರೆಡ್ ಹ್ಯಾಂಡ್ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.

ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ್ ಸೇರಿದಂತೆ ಸಿಬ್ಬಂದಿಗಳಾದ ಅಮರ್, ವಿಜಯ್, ಗುತ್ತಪ್ಪ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.