ಚಿತ್ರದುರ್ಗ –
ಹಳೇಯ ಕ್ರಿಯಾ ಯೋಜನೆಗೆ ಅನುಮತಿ ನೀಡಲು ಹಣದ ಬೇಡಿಕೆಯನ್ನು ಇಟ್ಟಿದ್ದ ತಾಲ್ಲೂಕು ಪಂಚಾಯತ EO ಅಧಿಕಾರಿಯನ್ನು ACB ಬಲೆಗೆ ಹಾಕಿಸಿದ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕು ಪಂಚಾಯತ್ ಇಓ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಪಿಡಿಓ ಯಿಂದ 20 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಇಓ ಅಧಿಕಾರಿ ಯಾಗಿದ್ದಾರೆ.
ಚಳ್ಳಕೆರೆ ಇಓ ಶ್ರೀಧರ್ ಬಾರಿಕೇರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.ಬೆಳೆಗೆರೆ ಗ್ರಾಮ ಪಂಚಾಯತಿ ಪಿಡಿಓ ಯಿಂದ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ ಭ್ರಷ್ಟ ಅಧಿಕಾರಿ.ಹಳೆಯ 10 ಕಾಮಗಾರಿಯ ಕ್ರಿಯಾ ಯೋಜನೆಗೆ 20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಇಓ.ಕಚೇರಿಯಲ್ಲಿ ಲಂಚ ಸ್ವೀಕರಿಸು ವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಚಿತ್ರದುರ್ಗ ಎಸಿಬಿ ಡಿವೈಎಸ್ಪಿ ಬಸವರಾಜ್ ಆರ್. ಮಗದುಮ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.