ತಮಿಳುನಾಡು –
ಸ್ವಾತಂತ್ರೋತ್ಸವದ ಉಡುಗೊರೆಯಾಗಿ ತಮಿಳುನಾಡು ಸರ್ಕಾರ ತಮ್ಮ ರಾಜ್ಯದ ಸರ್ಕಾರಿ ನೌಕರರ ತುಟ್ಟಿಭತ್ಯೆ ಯನ್ನು ಹೆಚ್ಚಿಸುವುದಾಗಿ ಘೋಷಣೆ ಮಾಡಿವೆ.ಹಲವು ದಿನಗಳಿಂದ ವೇತನ ಹೆಚ್ಚಳಕ್ಕಾಗಿ ನೌಕರರ ಒತ್ತಾಯಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿವೆ.ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ರಾಜ್ಯ ಮಟ್ಟದ ಸಮಾರಂಭದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಮಾತನಾಡಿ ರಾಜ್ಯ ಸರ್ಕಾರದ ಸುಮಾರು 9.38 ಲಕ್ಷ ನೌಕರರು, ಪಂಚಾಯತ್ ಸೇವೆ ಮತ್ತು ಪಿಂಚಣಿದಾರರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದರು.
ತಮಿಳುನಾಡು ಸರ್ಕಾರಿ ನೌಕರರಿಗೆ ಈ ಮೂಲಕ ಸ್ಟಾಲಿನ್ ಭರ್ಜರಿ ಕೊಡುಗೆ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯಲ್ಲಿ ಶೇಕಡ 3 ಹೆಚ್ಚಳ,ಸ್ವಾತಂತ್ರ್ಯ ಹೋರಾಟಗಾರರು ಮತ್ತು ಅವರ ವಂಶಸ್ಥರಿಗೆ ಮಾಸಿಕ ಪಿಂಚಣಿ ಹೆಚ್ಚಳ ಮಾಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಘೋಷಿಸಿದ್ದಾರೆ.
ಚೆನ್ನೈನ ಸೇಂಟ್ ಜಾರ್ಜ್ ಕೋಟೆಯ ಮೇಲೆ ರಾಷ್ಟ್ರ ಧ್ವಜಾರೋಹಣ ಮಾಡಿದ ಸ್ಟಾಲಿನ್, ಈ ವರ್ಷ ಜುಲೈ 1 ರಿಂದ ಜಾರಿಗೆ ಬರುವಂತೆ ಶೇಕಡ 3 ಡಿಎ ಹೆಚ್ಚಳವನ್ನು ನೀಡಲಾಗುವುದು ಎಂದು ಹೇಳಿದರು.ಸರ್ಕಾರದ ಬೊಕ್ಕ ಸಕ್ಕೆ ಹೊರೆ ಈ ಹೆಚ್ಚಳದಿಂದ ಬೊಕ್ಕಸಕ್ಕೆ 1,947.60 ಕೋಟಿ ರೂಪಾಯಿ ವೆಚ್ಚವಾಗಲಿದೆ ಮತ್ತು 16 ಲಕ್ಷ ನೌಕರರು ಮತ್ತು ಪಿಂಚಣಿದಾರರಿಗೆ ಲಾಭವಾಗಲಿದೆ.ರಾಜ್ಯ ಸರ್ಕಾರವು ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು 18,000 ರುಪಾಯಿಗಳಿಂದ 20,000 ರುಪಾಯಿಗಳಿಗೆ ಹೆಚ್ಚಿಸಲಾಗುವುದು ಮತ್ತು ಆಗಸ್ಟ್ 15 ರಿಂದ ಕುಟುಂಬ ಪಿಂಚಣಿಯನ್ನು 9,000 ರುಪಾಯಿಗಳಿಂದ 10,000 ರುಪಾಯಿಗಳಿಗೆ ಪರಿಷ್ಕರಿಸ ಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ಘೋಷಿ ಸಿದ್ದಾರೆ.