ಮುದ್ದೇಬಿಹಾಳ –
ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ತೀವ್ರವಾಗಿ ಗಾಯಗೊಂಡಿದ್ದ ಶಿಕ್ಷಕ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿ ದ್ದಾರೆ.ಹೌದು ಮುದ್ದೇಬಿಹಾಳ ಪಟ್ಟಣದ ಆಲಮಟ್ಟಿ ರಸ್ತೆಯ ಕೋಮಲ್ ಡಾಬಾ ಹತ್ತಿರ ರವಿವಾರ ರಾತ್ರಿ ಬೈಕ್ ಒಂದು ಕಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ದಲ್ಲಿ ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಸಿಲುಕಿದ್ದ ಇಲ್ಲಿನ ವಿವಿಧ ಸಂಘದ ಬಾಲಕಿಯರ ಪ್ರೌಢಶಾ ಲೆಯ ಶಿಕ್ಷಕ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ಮಹೇಶ ಕಿತ್ತೂರ (48) ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರನ್ನು ಬಾಗಲಕೋಟೆಯ ಡಾ.ಕಟ್ಟಿ ಆಸ್ಪತ್ರೆಗೆ ದಾಖಲಿಸಲಾ ಗಿತ್ತು.ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಮುದ್ದೇಬಿಹಾಳ ಪೊಲೀ ಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶರಣರ ವಚನಗಳ ವಿಶ್ಲೇಷಕರಾಗಿದ್ದು ಇದುವರೆಗೆ ಅಂದಾಜು 2800 ವಚನ ಗಳ ವಿಶ್ಲೇಷಣೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾರೆ.ತಾಲೂಕಿನ ವಚನ ಸಾಹಿತ್ಯದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ.ಅವರ ದುರಂತ ಸಾವಿಗೆ ಅಪಾರ ಶೋಕ ವ್ಯಕ್ತವಾಗುತ್ತಿದೆ. ನಿಧನ ಹಿನ್ನೆಲೆ ಅವರು ಸೇವೆ ಸಲ್ಲಿಸುತ್ತಿದ್ದ ಶಾಲೆಗೆ ರಜೆ ಘೋಷಿಸಲಾಗಿದ್ದು ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ತೀವ್ರವಾದ ಸಂತಾಪವನ್ನು ಸೂಚಿಸಿದ್ದಾರೆ.