ಬಾಗಲಕೋಟೆ –
ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ತೆರಳು ತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ನಿಧನ ರಾದ ಘಟನೆ ಬಾಗಲಕೋಟೆ ಯಲ್ಲಿ ನಡೆದಿದೆ ಮೇ 07 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಬಸ್ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಬಾಗಲಕೋಟೆಯ ಮುಧೋಳ ನಗರದಲ್ಲಿ ಈ ಒಂದು ಘಟನೆ ನಡೆದಿದೆ ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದು ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದ ವೇಳೆ ಈ ಒಂದು ಘಟನೆ ನಡೆದಿದೆ ಗೋವಿಂದಪ್ಪ ಸಿದ್ದಾಪುರ ಎಂಬ ಶಿಕ್ಷಕ ಸಾವಿಗೀಡಾದವರಾಗಿದ್ದಾರೆ.
ಮೃತಪಟ್ಟ ಶಿಕ್ಷಕ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು ಚುನಾವಣೆಯ ಹಿನ್ನಲೆ ಜಮಖಂಡಿ ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ಆಹ್ವಾನಿಸಲಾಗಿತ್ತು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ…..