ಶಿಕ್ಷಕಿ ಸಚಿತಾ ರೈ ಬಂಧನ – ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿರುವ ಪೊಲೀಸರು…..

Suddi Sante Desk
ಶಿಕ್ಷಕಿ ಸಚಿತಾ ರೈ ಬಂಧನ – ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿರುವ ಪೊಲೀಸರು…..

ಕಾಸರಗೋಡು

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ ಯೊಬ್ಬರನ್ನು ಕಾಸರಗೋಡು ಪೊಲೀಸರು ಬಂಧಿಸಿ ದ್ದಾರೆ.12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು 2 ಕೋಟಿಗೂ ಅಧಿಕ ಹಣ ಸಂಗ್ರಹ ಮಾಡಿದ್ದ ಆರೋಪದಲ್ಲಿ ವಿದ್ಯಾನಗರ ಪೊಲೀಸರು ಸಂಜೆ ವಶಕ್ಕೆ ಪಡೆದಿದ್ದಾರೆ.

ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದೆ. ಸಚಿತಾ ರೈ ತಲೆಮರೆಸಿಕೊಂಡಿದ್ದರು. ನ್ಯಾಯಾಲಯಕ್ಕೆ ಶರಣಾಗಲು ಆಗಮಿಸಿದಾಗ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.ಸಿಪಿಸಿಆರ್‌ಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್‌ಬಿಐ ಮುಂತಾದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ವ್ಯಕ್ತಿ ಗಳಿಂದ ಲಕ್ಷ ಲಕ್ಷ ರೂಪಾಯಿಗಳನ್ನು ಸಚಿತಾ ಸಂಗ್ರಹಿಸಿದ್ದರು.

ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದು, ಸಚಿತಾ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಇದರ ಬೆನ್ನಲ್ಲೇ ಇತರ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಸಿಪಿಸಿಆರ್‌ಐನಲ್ಲಿ ಕೆಲಸ ಕೊಡಿಸುವುದಾಗಿ ಸಚಿತಾ ನಿಶ್ಮಿತಾ ಶೆಟ್ಟಿಗೆ ಸುಮಾರು 15 ಲಕ್ಷ ರೂಪಾಯಿ ವಂಚಿಸಿದ್ದಾರೆ. ಅಲ್ಲದೆ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೇಲಂಪಾಡಿಯ ಸುಚಿತ್ರಾ ರಾವ್ ಎಂಬುವವರಿಂದ 7,31,500 ರೂ. ವಂಚಿಸಿದ್ದಾರೆ.ಬಾದೂರಿನ ಶಾಲೆ ಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

ಸುದ್ದಿ ಸಂತೆ ನ್ಯೂಸ್ ಕಾಸರಗೋಡು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.