ಧಾರವಾಡ –
ಚಂಡೀಘಡದಲ್ಲಿ ಇತ್ತೀಚೆಗೆ ಜರುಗಿದ ಸರಕಾರಿ ನೌಕರರ ರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಧಾರವಾಡ ಜಿಲ್ಲೆಯ ಶಿಕ್ಷಕಿ ಸರಸ್ವತಿ ಅವರು ಭಾಗವಹಿಸಿ ಪ್ರಶಸ್ತಿ ಗಳಿಸಿದ್ದಾರೆ.ಹೌದು ಪ್ರಸ್ತುತ ಜಿಲ್ಲೆಯ ನವಲಗುಂದ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ-04 ರಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸರಸ್ವತಿ ಲಕ್ಷ್ಮಣ ಸುಣಗಾರ ಅವರು ಸರಕಾರಿ ನೌಕರರ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಬಹು ಮಾನ ಗಳಿಸಿದ್ದಾರೆ
ಇತ್ತೀಚೆಗೆ ಚಂಡೀಘಡದಲ್ಲಿ ಜರುಗಿದ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯ 50 ಕೆ.ಜಿ ತೂಕದ ಕುಸ್ತಿ ವಿಭಾಗದಲ್ಲಿ ಸ್ಪರ್ಧಿಸಿ ಪ್ರಶಸ್ತಿ ಗಳಿಸಿದ್ದಾರೆ.ಅವರ ಈ ಸಾಧನೆಗೆ ರಾಜ್ಯ ಸರಕಾರಿ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ನೇತೃತ್ವದಲ್ಲಿ ಸಂಘದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಸುಬ್ಬಾಪುರಮಠ,ಗೌರವಾಧ್ಯಕ್ಷ ರಮೇಶ ಲಿಂಗದಾಳ,ಕಾರ್ಯದರ್ಶಿ ಮಂಜುನಾಥ ಯಡಹಳ್ಳಿ ಹಾಗೂ ಇತರ ಪದಾಧಿಕಾರಿಗಳು ಇದ್ದರು.