ರಾಜ್ಯಕ್ಕೆ ಮಾದರಿಯಾದ ಸರ್ಕಾರಿ ಶಾಲಾ ಶಿಕ್ಷಕಿ – ಕೊಟ್ಟ ಕೆಲಸವನ್ನು ಥಟ್ ಅಂತಾ ಮುಗಿಸಿ ಮೆಚ್ಚುಗೆಗೆ ಪಾತ್ರರಾದ ಶಾಂತಮ್ಮ ಟೀಚರ್…..

Suddi Sante Desk
ರಾಜ್ಯಕ್ಕೆ ಮಾದರಿಯಾದ ಸರ್ಕಾರಿ ಶಾಲಾ ಶಿಕ್ಷಕಿ – ಕೊಟ್ಟ ಕೆಲಸವನ್ನು ಥಟ್ ಅಂತಾ ಮುಗಿಸಿ ಮೆಚ್ಚುಗೆಗೆ ಪಾತ್ರರಾದ ಶಾಂತಮ್ಮ ಟೀಚರ್…..

ರಾಮನಗರ

7 ದಿನದಲ್ಲೇ ಸಮೀಕ್ಷೆ ಮುಗಿಸಿ ಜಿಲ್ಲಾಧಿಕಾರಿಯಿಂದ ಮೆಚ್ಚುಗೆಗೆ ಪಾತ್ರರಾದ ಚಿತ್ರಣವೊಂದು ರಾಮನಗರ ದಲ್ಲಿ ನಡೆದಿದೆ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ. 22ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ ಮನೆಗಳನ್ನು ಕೇವಲ 7 ದಿನದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ (ಯುಜಿಎಚ್‌ಪಿಎಸ್) ಸಹ ಶಿಕ್ಷಕಿ ಶಾಂತಮ್ಮ ಪೂರ್ಣ ಗೊಳಿಸಿದ್ದಾರೆ.

ಶಿಕ್ಷಕಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು, ಶಾಂತಮ್ಮ ಅವರನ್ನು ಸೋಮವಾರ ತಮ್ಮ ಕಚೇರಿಗೆ ಕರೆದು ವೈಯಕ್ತಿಕವಾಗಿ ₹1,001 ನಗದು ಬಹುಮಾನ ಹಾಗೂ ಅಭಿನಂದನಾ ಪತ್ರ ನೀಡಿದ್ದಾರೆ ತಮಗೆ ವಹಿಸಿದ ಕೆಲಸವನ್ನು ತ್ವರಿತವಾಗಿ ಮಾಡಿ ಮುಗಿಸಿರುವ ಶಿಕ್ಷಕಿಯ ವೃತ್ತಿಪರತೆಯನ್ನು ಕೊಂಡಾಡಿದ್ದಾರೆ.

86 ಮನೆಗಳ ಸಮೀಕ್ಷೆಯನ್ನ ಶಾಂತಮ್ಮ ಅವರಿಗೆ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನ ದೊಡ್ಡಿ ಹಾಗೂ ಗೋವಿಂದೇಗೌಡನದೊಡ್ಡಿ ಗ್ರಾಮದ 86 ಮನೆಗಳನ್ನು ಸಮೀಕ್ಷೆ ಮಾಡುವಂತೆ ನಿಗದಿ ಪಡಿಸಲಾಗಿತ್ತು. ಸಮೀಕ್ಷೆ ಪೂರ್ಣಕ್ಕೆ 15 ದಿನಗಳಿದ್ದರೂ, ಶಾಂತಮ್ಮ ಅವರು ಅವಧಿಗೂ ಮುಂಚೆ ಕೇವಲ ಏಳೇ ದಿನದಲ್ಲಿ ಅಷ್ಟೂ ಮನೆಗಳ ಮಾಹಿತಿ ಸಂಗ್ರಹಿಸಿ ಸಮೀಕ್ಷೆ ಮುಗಿಸಿದ್ದರು.

‘ಸಮೀಕ್ಷೆಯಲ್ಲಿ ನೀವು ತೋರಿದ ಆಸಕ್ತಿ, ಉತ್ಸಾಹ ಮತ್ತು ಪ್ರಾಮಾಣಿಕ ಪ್ರಯತ್ನವು ಸಮೀಕ್ಷೆ ಕಾರ್ಯ ತ್ವರಿತವಾಗಿ ಸಾಗಲು ಸಹಕಾರಿಯಾಗಿದೆ. ಸಮೀಕ್ಷಾ ಕಾರ್ಯಕ್ಕೆ ನೀವು ನೀಡಿದ ಸಹಕಾರ ಮತ್ತು ಉತ್ಸಾಹ ವನ್ನು ಜಿಲ್ಲಾಡಳಿತ ಪ್ರಶಂಸಿಸುತ್ತದೆ.

ತಮ್ಮ ಈ ಕಾರ್ಯಶ್ರದ್ದೆಗೆ ನನ್ನ ಸ್ವಂತ ಹಣದಿಂದ ನಗದು ಬಹುಮಾನ ನೀಡಿ ಶ್ಲಾಘಿಸಿದ್ದೇನೆ. ಮುಂದೆಯೇ ನಿಮ್ಮಿಂದ ಇಂತಹದ್ದೇ ಕಾರ್ಯಕ್ಷಮತೆಯನ್ನು ಜಿಲ್ಲಾಡ ಳಿತ ಬಯಸುತ್ತದೆ’ ಎಂದು ಜಿಲ್ಲಾಧಿಕಾರಿ ಅಭಿನಂದನಾ ಪತ್ರದಲ್ಲಿ ತಿಳಿಸಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ರಾಮನಗರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.