ಬೆಳ್ತಂಗಡಿ –
ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ .ಉಜಿರೆ ರಥಬೀದಿ ನಿವಾಸಿ ಸುಪ್ರಭಾ ಪಿ. (40) ಮೃತಪಟ್ಟಿರುವ ಶಿಕ್ಷಕಿಯಾಗಿದ್ದಾರೆ
ಚಾರ್ಮಾಡಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.ತಮ್ಮ ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿತ್ತು.
ಅಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದು ಅವರಿಗೆ ಪತಿ ಹಾಗೂ ಇಬ್ಬರು ಪುತ್ರರಿದ್ದಾರೆ ಮೃತರಾದ ಶಿಕ್ಷಕಿಗೆ ನಾಡಿನ ಶಿಕ್ಷಕ ಬಂಧುಗಳು ಸಂತಾಪವನ್ನು ಸೂಚಿಸಿ ಕಂಬನಿ ಮಿಡಿದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಳ್ತಂಗಡಿ…..