ಶಾಲಾ ಆರಂಭದ ಬೆನ್ನಲ್ಲೇ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ಇಲಾಖೆ – ಶಿಕ್ಷಣ ಸಚಿವರಿಂದ ಮಾಹಿತಿ…..

ತುಮಕೂರು –

ಶಾಲಾ ಆರಂಭದ ಬೆನ್ನಲ್ಲೇ ನಾಡಿನ ಶಿಕ್ಷಕರಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ‌.ಹೌದು ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದಾರೆ. ಶಿಕ್ಷಕರ ವರ್ಗಾವಣೆಗೆ ಸೆಪ್ಟೆಂಬರ್ 5 ರಿಂದಲೇ ಕೌನ್ಸಿಲಿಂಗ್ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಶಿಕ್ಷಕರ ವರ್ಗಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು ಮುಂದಿನ ಮಾಹೆಯ 5 ರಿಂದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆರಂಭಿಸಲಾಗು ವುದು ಯಾವುದೇ ಗೊಂದಲಕ್ಕೆ‌ ಅವಕಾಶವಿಲ್ಲದೆ ಸುಮಾರು 35-40 ಸಾವಿರ ಶಿಕ್ಷಕರನ್ನು ಅವರು ಬಯಸಿದ ಸ್ಥಳಕ್ಕೆ ವರ್ಗಾವಣೆ ‌ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಇನ್ನು ಮುಂದೆ ರಾಜ್ಯದಲ್ಲಿ ಟಿ.ಇ.ಟಿ. ಪರೀಕ್ಷೆ ಗಳನ್ನು‌ 6 ತಿಂಗಳಿಗೊಮ್ಮೆ ನಿಗದಿತ ದಿನಾಂಕಗಳಂದು ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ.ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published.

error: Content is protected !!
%d bloggers like this: