ಚಿತ್ರದುರ್ಗ –
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಹೆಡ್ ಕಾನ್ಸ್ಟೇಬಲ್ ರೊಬ್ಬರು ಮೃತರಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಹೌದು ಜಿಲ್ಲೆಯ ಮೊಳ ಕಾಲ್ಮೂರು ತಾಲೂಕಿನ ಬಿ.ಜಿ.ಕೆರೆಯ ಗ್ರಾಮದ ಬಳಿ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಓಮ್ನಿ ಕಾರಿನಲ್ಲಿದ್ದ ಬಳ್ಳಾರಿ ಮಹಿಳಾ ಠಾಣೆಯ ಹೆಡ್ ಕಾನ್ಸ್ಟೇಬಲ್ (WPC ) ಟಿಪ್ಪು ಸುಲ್ತಾನ್ (42) ಮತ್ತು ಮತ್ತೊಂದು ಕಾರಿನಲ್ಲಿದ್ದ ಬಳ್ಳಾರಿ ಮೂಲದ ಉಪನ್ಯಾಸಕ ಸುರೇಶ್ (58) ಸಾವಿಗೀಡಾಗಿದ್ದಾರೆ.
ಸುರೇಶ್ ಪತ್ನಿ ಪಾರ್ವತಮ್ಮಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.