ಮಂಡ್ಯ –
ಬಸ್ ಮತ್ತು ಸೀಫ್ಟ್ ಕಾರು ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ಮಂಡ್ಯ ದಲ್ಲಿ ನಡೆದಿದೆ ಸ್ಥಳದಲ್ಲೇ ಮೂವರು ದುರ್ಮರಣವಾಗಿದ್ದು ಐವರಿಗೆ ಗಾಯಗಳಾಗಿವೆ.ಕೆಂಪನಕೊಪ್ಪಲು ಗೇಟ್ ಬಳಿ ಈ ಒಂದು ಘಟನೆ ನಡೆದಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕೆಂಪನಕೊಪ್ಪಲು ಗೇಟ್ ಬಳಿ ನಡೆದಿದೆ.ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಮೈಸೂರು ಕಡೆಗೆ ಹೊಗುತ್ತಿದ್ದ ಕಾರು ನಡುವೆ ಡಿಕ್ಕಿಯಾಗಿ ಈ ಒಂದು ದುರ್ಘಟನೆ ಸಂಭವಿಸಿ ದೆ.ಕೊಡಗು ಮೂಲದವರಾಗಿದ್ದಾರೆ ಮೃತರೆಲ್ಲರೂ
ಕಾರಿನಲ್ಲಿದ್ದ ನಾಲ್ಕು ಮಂದಿಯಲ್ಲಿ ಮೂವರ ಸಾವಿಗೀಡಾ ಗಿದ್ದು ಕಾರಿನಲ್ಲಿದ್ದ ಓರ್ವ ಯುವತಿಯ ಸ್ಥಿತಿ ಗಂಭೀರವಾ ಗಿದೆ.ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ಮೃತಪಟ್ಟವರ ಶವ ರವಾನೆ ಮಾಡಲಾಗಿದೆ. ನಾಗಮಂಗಲ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ