ಬೆಂಗಳೂರು –
ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ KSPSTA – ಶಿಕ್ಷಕರ ಸಂಘದ ನಿರಂತರ ಪ್ರಯತ್ನ ದಿಂದಾಗಿ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದ ರಾಜ್ಯಾಧ್ಯಕ್ಷ ಕೆ ನಾಗೇಶ್,ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಟೀಮ್…..
ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ನೀಡಿದ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಅಭಿನಂದನೆಗಳನ್ನು ಸಲ್ಲಿಸಿದೆ. ಹೌದು ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಸುದ್ದಿಯನ್ನು ನೀಡಿರುವ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಮತ್ತು ಸಮಸ್ತ ಸಚಿವ ಸಂಪುಟದ ಸದಸ್ಯರಿಗೆ ಧನ್ಯವಾದಗಳನ್ನು
ಸಂಘದ ರಾಜ್ಯಾಧ್ಯಕ್ಷ ಕೆ ನಾಗೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ ಈ ಒಂದು ವಿಚಾರ ಕುರಿತಂತೆ ಸುದ್ದಿ ಸಂತೆ ಯೊಂದಿಗೆ ಮಾತನಾಡಿದ ಅವರು 7ನೇ ವೇತನ ಆಯೋಗ ಅನುಷ್ಠಾನ ಕುರಿತಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರೊಂದಿಗೆ ಸಂಘಟನೆಯ ರಾಜ್ಯಾಧ್ಯಕ್ಷರು ಪ್ರಧಾನ ಕಾರ್ಯದರ್ಶಿಯವರನ್ನು ಒಳಗೊಂಡ ನಿಯೋಗ ನಿರಂತವಾಗಿ ಬಿಡುವಿಲ್ಲದೇ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಸದಸ್ಯರನ್ನು ಭೇಟಿಯಾಗಿ
ಚರ್ಚೆ ಮಾಡಿ ಸಭೆಗೆ ಇಂದು ತಗೆದುಕೊಂಡು ಬರುವಂತೆ ಫಾಲೋ ಆಫ್ ಮಾಡಲಾಗಿತ್ತು ಹೀಗಾಗಿ ಈ ಒಂದು ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚೆಗೆ ತಗೆದುಕೊಂಡು ಬಂದು ಪೈನಲ್ ಮಾಡಿ ಅನುಮೋದನೆ ಮಾಡಲಾಗಿದ್ದು ಹೀಗಾಗಿ ಈ ಒಂದು ಕಾರ್ಯದಲ್ಲಿ ಸಂಘಟನೆಯ ಪಾತ್ರ ಮಹತ್ವವಾಗಿದ್ದು ಒಪ್ಪಿಗೆ
ನೀಡಿರುವ ಸಮಸ್ತ ರಾಜ್ಯ ಸರ್ಕಾರದ ಟೀಮ್ ಗೆ ರಾಜ್ಯದ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..