ಬೆಳಗಾವಿ –
ವಿಧಾನ ಪರಿಷತ್ ನಲ್ಲಿ ಪ್ರತಿಧ್ವನಿಸಿದ 7ನೇ ವೇತನ ಆಯೋಗ ಜಾರಿಗೆ – ಶೀಘ್ರದಲ್ಲೇ ಜಾರಿ ಯಾಗಲಿದೆ ರಾಜ್ಯ ಸರ್ಕಾರಿ ನೌಕರರ ಬಹು ನಿರೀಕ್ಷಿತ 7ನೇ ವೇತನ ಆಯೋಗ ಹೌದು
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ 7ನೇ ವೇತನ ಜಾರಿಗೆ ಆಗ್ರಹ ಕಂಡು ಬಂದಿತು. ಈ ಒಂದು ವಿಚಾರ ಕುರಿತಂತೆ ಪ್ರತಿಪಕ್ಷಗಳು ಕೂಡಲೇ ರಾಜ್ಯದ ಸರ್ಕಾರಿ ನೌಕರ ರಿಗೆ ಜಾರಿಗೆ ತರಬೇಕೆಂದು ಪಟ್ಟು ಹಿಡಿದಿದ್ದು ಕಂಡು ಬಂದಿತು.
ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಪ್ರತಿಪಕ್ಷಗಳ ಪಟ್ಟು ಹಿಡಿದಿದ್ದು ಇತ್ತ ಭರವಸೆ ಹಿನ್ನೆಲೆಯಲ್ಲಿ ಕೂಡಲೇ ವಿರೋಧ ಪಕ್ಷದವರು ತಮ್ಮ ಧರಣಿಯನ್ನು ಹಿಂಪಡೆದಿದ್ದು ಕಂಡು ಬಂದಿತು ಸಧ್ಯ ರಾಜ್ಯದಲ್ಲಿ 7ನೇ ವೇತನ ಆಯೋಗ ಜಾರಿಗೆ ಮಾಡಬೇಕು.
7 ಲಕ್ಷ ಜನ ಮಾಡುವ ಕೆಲಸವನ್ನು ಈಗ 4 ಲಕ್ಷ ನೌಕರರು ಮಾಡುತ್ತಿದ್ದಾರೆ.ಈ ಕುರಿತು ಮುಖ್ಯ ಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇ ಕೆಂದು ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಜೆಡಿಎಸ್ ಸದಸ್ಯರು ಧರಣಿ ಕೈಗೊಂಡರು.
ಸರ್ಕಾರ ಭರವಸೆ ನೀಡಿದ್ದರಿಂದ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರ ಸೂಚನೆ ಮೇರೆಗೆ ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯರು ಕೈಗೊಂಡಿದ್ದ ಧರಣಿಯನ್ನು ಕೈಬಿಟ್ಟರು.ಮತ್ತೊಂದೆಡೆ ಸಚಿವ ಜಮೀರ್ ಅಹಮದ್ ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆ ಪ್ರಸ್ತಾಪವನ್ನು ಸದನದಲ್ಲಿ ಚರ್ಚೆಯ ಬದಲು ಸಭಾಪತಿಗಳ ಕೊಠಡಿಯಲ್ಲಿ ಚರ್ಚೆ ನಡೆಸಲು ನಿರ್ಧರಿಸಲಾಯಿತು.
ಇನ್ನೂ ಇತ್ತ ಈ ಒಂದು ವಿಚಾರ ಕುರಿತಂತೆ ಸಿಎಂ ಉತ್ತರಕ್ಕೆ ಪಟ್ಟು ಹಿಡಿಯಲಾಯಿತು. ಪ್ರತಿಪಕ್ಷಗಳ ಧರಣಿಯಿಂದ ಮುಂದೂಡಿಕೆಯಾಗಿದ್ದ ವಿಧಾನ ಪರಿಷತ್ ಸದನ ಪುನಾರಂಭ ಆಗುತ್ತಿದ್ದಂತೆ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಮಾತನಾಡಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ನಮ್ಮ ವಿರುದ್ಧ ಬ್ಲಾಕ್ ಮೇಲ್ ಮಾಡುತ್ತಿದ್ದೇವೆ ಎನ್ನುವ ಆರೋಪ ಮಾಡಿದ್ದು ಆದರೆ ನಾವು ಬ್ಲಾಕ್ ಮೇಲ್ ಮಾಡುತ್ತಿಲ್ಲ.
ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ.7 ಲಕ್ಷ ಜನ ಮಾಡಬೇಕಾ ದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಿ ದ್ದಾರೆ. ಹಾಗಾಗಿ ಈ ಕುರಿತು ಮುಖ್ಯಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇಕು ಎಂದು ಆಗ್ರಹಿಸಿದರು.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..