ಬೆಂಗಳೂರು –
2024ರ ಫೆಬ್ರವರಿಯಲ್ಲಿ ರಾಜ್ಯದ ಸರ್ಕಾರದ ಬಜೆಟ್ ಅಧಿವೇಶನ ನಡೆಯಲಿದೆ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು 2024ರ ಫೆಬ್ರವರಿಯಲ್ಲಿ ವಿಧಾನಮಂಡಲ ಜಂಟಿ ಮತ್ತು ಬಜೆಟ್ ಅಧಿವೇ ಶನ ನಡೆಯಲಿದೆ
ಈ ಒಂದು ಕುರಿತು ಕಾನೂನು ಮತ್ತು ಸಂಸದೀ ಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನು ಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ
12 ತಿಂಗಳು ಪೌಷ್ಟಿಕ ಆಹಾರ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದರು. ರಾಜ್ಯ ದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯ ಕಾರ್ಯಯೋಜನೆ ಹಮ್ಮಿಕೊಳ್ಳಲು ಸಚಿವ ಸಂಪುಟ ಉಪಸಮಿತಿ ರಚಿಸಲು ನಿರ್ಧಾರ ಮಾಡಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಎರಡು ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.ಇನ್ನೂ ಈ ಒಂದು ಬಜೆಟ್ ನಲ್ಲಾದರೂ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕಾಯುತ್ತಿರುವ 7 ನೇ ವೇತನ ಆಯೋಗ ಘೋಷಣೆ ಆಗುತ್ತದೆ ಎಂಬ ನಿರೀಕ್ಷೆಯಲ್ಲಿ ನೌಕರರು ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..