ನವದೆಹಲಿ –
ಶಿಕ್ಷಕರ ನೇಮಕಾತಿಗೆ ತಡೆಯಾಜ್ಞೆ ನೀಡಿರುವ ವಿಚಾರ ಕುರಿತು ತುರ್ತಾಗಿ ವಿಚಾರಣೆ ಮಾಡಲು ಸರ್ವೋಚ್ಚ ನ್ಯಾಯಾಲಯವು ನಿರಾಕರಿಸಿದೆ ಹೌದು ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರಾತ್ಮಕ ಸ್ಪಂದನೆ ನೀಡಿದೆ.
ಕರ್ನಾಟಕದಲ್ಲಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ನೀಡಿರುವ ತಡೆ ಯಾಜ್ಞೆ ಆದೇಶದ ವಿರುದ್ಧ ಕರ್ನಾಟಕ ಸರ್ಕಾರದ ಮನವಿಯನ್ನು ತುರ್ತಾಗಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ
ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲ ದೇವದತ್ತ್ ಕಾಮತ್ ಮಾಡಿದ ಮನವಿಯನ್ನು ತಿರಸ್ಕರಿಸಿತು.ಈ ಪ್ರಕರಣದ ವಿಚಾರಣೆಯನ್ನು ಫೆಬ್ರುವರಿ 19ರಂದು ನಡೆಸ ಲಾಗುವುದು ಎಂದು ಪೀಠ ತಿಳಿಸಿತು.
ನೇಮಕಾತಿ ಪ್ರಕ್ರಿಯೆಗೆ ನೀಡಿರುವ ತಡೆಯಾಜ್ಞೆ ಆದೇಶವನ್ನು ಮಾರ್ಪಡಿಸಬೇಕು ಎಂದು ಕೋರಿ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು ಸಧ್ಯ ಈ ಒಂದು ಅರ್ಜಿಯನ್ನು ಮುಂದೂಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ……