ತುರುವೇಕೆರೆ –
ಮಕ್ಕಳ ಎದುರಿಗೆ ಪರಸ್ಪರ ಗಲಾಟೆ ಮಾಡಿ ಕೊಳ್ಳುತ್ತಿದ್ದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿದ ಘಟನೆ ತುರುವೇಕೆರೆ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಬುಗುಡನಹಳ್ಳಿಯಲ್ಲಿ ನಡೆದಿದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಾಲಾ ಅವಧಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದರು
ಶಿಕ್ಷಕರಾದ ಮಲ್ಲಿಕಾರ್ಜುನ್ ಮತ್ತು ರಾಜು ಅವರನ್ನು ತನಿಖೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾ ಧಿಕಾರಿ ಎನ್.ಸೋಮಶೇಖರ್ ತಿಳಿಸಿದ್ದಾರೆ ಶಾಲಾ ಸಮಯದಲ್ಲಿ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದು ಮಕ್ಕಳ ಕಲಿಕೆಯ ಮೇಲೆ ವ್ಯತಿರಿಕ್ತ ಪರಿಣಾಮಕ್ಕೆ ಕಾರಣ ವಾಗಿತ್ತು
ಈ ಒಂದು ಕುರಿತು ಶಾಲಾಡಳಿತ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರ ಹೇಳಿಕೆ ನೀಡಿದ್ದರು ಹೀಗಾಗಿ ತಪ್ಪಿತಸ್ಥರನ್ನು ಮೂರು ತಿಂಗಳು ಅಮಾನತು ಮಾಡಲಾಗಿದೆ ಎಂದಿದ್ದಾರೆ.ಈ ಬಗ್ಗೆ ಇಲಾಖಾ ತನಿಖೆ ನಡೆಸಲಾಗುವುದು. ಮೇಲಾಧಿ ಕಾರಿಗಳಿಗೆ ವರದಿ ನೀಡಲಾಗಿದೆ. ಅಮಾನತ್ತಾದ ಶಿಕ್ಷಕರ ಸ್ಥಾನಕ್ಕೆ ಬೇರೆ ಶಿಕ್ಷಕರನ್ನು ನಿಯೋಜಿಸ ಲಾಗಿದೆ.
ಸುದ್ದಿ ಸಂತೆ ನ್ಯೂಸ್ ತುರುವೇಕೆರೆ…..