ನವದೆಹಲಿ –
ಸರ್ಕಾರಿ ನೌಕರರಿಗೆ ಭರ್ಜರಿ ನ್ಯೂಸ್ ವೊಂದು ಸಿಕ್ಕಿದೆ ಹೌದು ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ ಹೌದು ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ
ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಈ ಮೂಲಕ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಿಸಿದೆ. ಅದ್ರಂತೆ ಏರುತ್ತಿರುವ ಹಣದುಬ್ಬರದ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರವು ಕಾಲಕಾಲಕ್ಕೆ ತುಟ್ಟಿಭತ್ಯೆಯನ್ನ ಹೆಚ್ಚಿಸುತ್ತಲೇ ಇರುತ್ತದೆ.
ಇದನ್ನ ಸಾಮಾನ್ಯವಾಗಿ ಪ್ರತಿ ವರ್ಷ ಎರಡು ಬಾರಿ ಪರಿಷ್ಕರಿಸಲಾಗುತ್ತದೆ -ಜನವರಿ ಮತ್ತು ಜುಲೈ ನಲ್ಲಿ ಡಿಎ ಹೆಚ್ಚಳ ಮತ್ತು ಪಾವತಿಗೆ ಸಂಬಂಧಿಸಿದ ಪ್ರಕಟಣೆಯನ್ನ ಸಾಮಾನ್ಯವಾಗಿ ಮಾರ್ಚ್‌ನಲ್ಲಿ ಮಾಡಲಾಗುತ್ತದೆ ಸಧ್ಯ ಹೆಚ್ಚಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..