This is the title of the web page
This is the title of the web page

Live Stream

[ytplayer id=’1198′]

November 2024
T F S S M T W
 123456
78910111213
14151617181920
21222324252627
282930  

| Latest Version 8.0.1 |

Local News

ಪ್ರೇಮಿಗಳ ದಿನಾಚರಣೆ ದಿನದಂದೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು – ತಡವಾಗಿ ಬೆಳಕಿಗೆ ಬಂತು ಪ್ರಕರಣ…….

WhatsApp Group Join Now
Telegram Group Join Now

ಬೆಳಗಾವಿ –

ಪ್ರೇಮಿಗಳ ದಿನದಂದೇ ಪ್ರೇಮಿಗಳಿಬ್ಬರು ನೇಣಿಗೆ ಕೊರಳೊಡ್ಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹಂಚಿನಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಟ್ರ್ಯಾಕ್ಟರ್‌ ಶೆಡ್‌ ನಲ್ಲಿ ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿದ್ದಾರೆ.

ನಿನ್ನೆ ಸಂಜೆ ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಈ ಒಂದು ಧಾರುಣ ಘಟನೆ ನಡಿದೆದೆ.ಹಂಚಿನಾಳ ಗ್ರಾಮದ ಆಸೀಫ್ (21) ಮತ್ತು ಮಾಸಾಬಿ(19) ಆತ್ಮಹತ್ಯೆ ಮಾಡಿಕೊಂಡ ಯುವ ಪ್ರೇಮಿಗಳಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಮಾಸಾಬಿ ಮನೆಯವರು ಬೇರೆ ಹುಡುಗನ ಜೊತೆ ಮದುವೆ ನಿಶ್ಚಯ ಮಾಡಿದ್ರು ಮಾರ್ಚ್ 8 ರಂದು ಬೇರೆ ಹುಡುಗನ ಜೊತೆ ಮಾಸಾಬಿ ಮದುವೆ ಮಾಡಲು ನಿರ್ಧರಿಸಿದ್ದರು ಹೀಗಾಗಿ ನಿನ್ನೇ ಪ್ರೇಮಿಗಳ ದಿನದಂದೇ ಇಬ್ಬರು ಸೇರಿಕೊಂಡು ಸಾವಿಗೆ ಶರಣಾಗಿದ್ದಾರೆ.

ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಆಸೀಫ್ ಮತ್ತು ಮಾಸಾಬಿ ಈ ಕುರಿತಂತೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk