ಶಿಕ್ಷಕನ ವಿರುದ್ದ ದಾಖಲಾಯಿತು ಪ್ರಕರಣ ಹೊಸ ತಿರುವು ಪಡೆದುಕೊಂಡ ಘಟನೆ

Suddi Sante Desk
ಶಿಕ್ಷಕನ ವಿರುದ್ದ ದಾಖಲಾಯಿತು ಪ್ರಕರಣ ಹೊಸ ತಿರುವು ಪಡೆದುಕೊಂಡ ಘಟನೆ

ದಾವಣಗೆರೆ

 

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ನೋರ್ವನಿಗೆ ಧರ್ಮದೇಟು ನೀಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಯರಗಟ್ಟೆಹಳ್ಳಿ  ಗ್ರಾಮದಲ್ಲಿ ಈ ಘಟನೆ ನಡೆದಿದೆ.

 

ಹೌದು ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ಲೋಕೇಶ್ ಗೆ ಗ್ರಾಮಸ್ಥರು ಥಳಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕ ಲೋಕೇಶ್ ತಮ್ಮ ಜೊತೆ ಅನುಚಿತವಾಗಿ ನಡೆದುಕೊಂಡಿರುವ ಬಗ್ಗೆ ಮಕ್ಕಳು ಪೋಷಕರಿಗೆ ತಿಳಿಸಿದ್ದಾರೆ.

 

 

ಕಳೆದ ಕೆಲವು ದಿನಗಳಿಂದ ಶಿಕ್ಷಕ ಈ ರೀತಿಯಾಗಿ ನಡೆದುಕೊಳ್ಳುತ್ತಿದ್ದ ಎಂದು ವರದಿಯಾಗಿದ್ದು ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸಧ್ಯಕ್ಕೆ ಈ ಒಂದು ವಿಚಾರ ಕುರಿತು ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.