ಬೆಂಗಳೂರು –
ಮಹಾಮಾರಿಯ ಕರೋನದ ಆತಂಕದ ನಡುವೆ ಯೂ ನಾಡಿನ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯುತ್ತಿದ್ದಾರೆ.ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿಗಳಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಭ ಹಾರೈಸಿದ್ದಾರೆ.ಯುವ ಉತ್ಸಾಹಿ ಗೆಳೆಯರೇ ಪರೀಕ್ಷೆ ಯಲ್ಲಿ ನಿಮಗೆ ಒಳ್ಳೆಯದಾಗಲಿ,ರಾಜ್ಯ ಸರ್ಕಾರ ಪರೀಕ್ಷೆ ಯಲ್ಲಿ ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಕೈಗೊಂಡಿದೆ ಎಂದು ಪಾಲಕರಿಗೆ ಹೇಳಿದರು

ಇನ್ನೂ ಇದೇ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಾ ಶುಭ ಹಾರೈಸಿ ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಏಕ ತಂಡವಾಗಿ ಉತ್ತಮ ವ್ಯವಸ್ಥೆಗಳನ್ನು ಮಾಡಿವೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ.ನಿಮ್ಮ ಮಕ್ಕಳು ನಮ್ಮೆಲ್ಲರ ಮಕ್ಕಳು. ನಮ್ಮ ಎಲ್ಲಾ ಪರೀಕ್ಷಾ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರಗಳಾಗಿವೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು

ವರದಿ – ಅನ್ನಪೂರ್ಣೇಶ್ವರಿ ಸುದ್ದಿ ಸಂತೆ ನ್ಯೂಸ್ ಧಾರವಾಡ