ಬೆಂಗಳೂರು –
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತೊಂದರೆಯಾಗಬಾರ ದೆಂಬ ಕಾರಣಕ್ಕಾಗಿ ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಆಗಸ್ಟ್ 23 ರಿಂದ ರಾಜ್ಯದಲ್ಲಿ ಶಾಲೆಗಳು ಆರಂಭ ವಾಗುತ್ತಿದ್ದು ಹೀಗಾಗಿ ಶಿಕ್ಷಣ ಇಲಾಖೆಯ ಅಧಿಕಾರಿ ಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಮಾಡದಂತೆ ಖಡಕ್ ಸೂಚನೆಯನ್ನು ನೀಡಿದರು.

ಕಟ್ಟು ನಿಟ್ಟಾಗಿ ಕೆಲವೊಂದಿಷ್ಟು ಮಾರ್ಗಸೂಚಿಗ ಳನ್ನು ಹಾಗೇ ಶಿಕ್ಷಕರಿಗೆ ಮಕ್ಕಳಿಗೆ ಎಲ್ಲಾ ವ್ಯವಸ್ಥೆ ಯನ್ನು ಮಾಡುವಂತೆ ನೋಡಿಕೊಳ್ಳುವಂತೆ ಖಡಕ್ ಸೂಚನೆಯನ್ನು ನೀಡಿದರು.ಸೋಮವಾರದಿಂದ ಶಾಲೆ ಆರಂಭವಾಗಲಿವೆ. ಸರ್ಕಾರದಿಂದ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ನನ್ನ ಜೊತೆ ಶಿಕ್ಷಣ ಸಚಿವರು ಕೂಡ ಶಾಲೆಗಳಿಗೆ ಭೇಟಿ ನೀಡುತ್ತಾರೆ.ಇನ್ನೂ ಈಗಾಗಲೇ ಶಾಲೆಗಳ ಆರಂಭ ಕುರಿತಂತೆ ಎಲ್ಲಾ ರೀತಿಯ ಸಿದ್ದತೆ ಮಾಡಿ ಕೊಳ್ಳಲಾಗಿದೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್ ನೀಡಲಾಗಿ ದೆ.ಶಾಲೆಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು.ಪೋಷಕರ ಸಮ್ಮತಿಯನ್ನು ಪಡೆದು ಮಕ್ಕಳು ಶಾಲೆಗೆ ಬರತಕ್ಕದು. ಪೋಷಕರು ಕೂಡ ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.